ಚಿತ್ರದುರ್ಗ : ಫೆ.28 ರಂದು ಹರ್ಷ ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

1 Min Read

ಚಿತ್ರದುರ್ಗ : ರಾಜ್ಯ ವಿಧಾನಸಭೆ ಅಧಿವೇಶನಕ್ಕೆ ಅಡ್ಡಿಪಡಿಸಿ ಸಮಯ ವ್ಯರ್ಥ ಮಾಡಿದ ಕಾಂಗ್ರೆಸ್‍ನ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ನೀತಿ ಮತ್ತು ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಜಿಂಗಾಡೆರವರ ಹತ್ಯೆ ಖಂಡಿಸಿ ಬಿಜೆಪಿ.ಯಿಂದ ಫೆ.28 ಸೋಮವಾರ ಬೆಳಿಗ್ಗೆ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು.

ವಿಧಾನಸಭೆ ಅಧಿವೇಶವನ್ನು ಬಹಿಷ್ಕರಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್‍ಗೆ ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸುವುದು ಬೇಕಿಲ್ಲ. ಅನಗತ್ಯ ವಿಚಾರಗಳನ್ನು ಮುಂದಿಟ್ಟುಕೊಂಡು ಅಧಿವೇಶನಕ್ಕೆ ಅಡ್ಡಿಪಡಿಸಿದ್ದು, ಸಂವಿಧಾನ ವಿರೋಧಿಯಾಗಿದೆ.

ಅದೇ ರೀತಿ ಹರ್ಷ ಜಿಂಗಾಡೆಯನ್ನು ಕೊಲೆಗೈದವರಿಗೆ ಕಠಿಣ ಶಿಕ್ಷೆಯಾಗುವಂತೆ ಒತ್ತಾಯಿಸಿ ಡೆಂಟಲ್ ಕಾಲೇಜು ಸಮೀಪವಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹತ್ತಿರದಿಂದ ಹೊರಡುವ ಪ್ರತಿಭಟನೆಯಲ್ಲಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಗೂಳಿಹಟ್ಟಿ ಡಿ.ಶೇಖರ್, ಪೂರ್ಣಿಮ ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಇವರುಗಳು ಭಾಗವಹಿಸಲಿದ್ದಾರೆ.

ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರುಗಳು,ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಬಿಜೆಪಿ.ಪ್ರಕಟಣೆಯಲ್ಲಿ ಕೋರಿದೆ.

Share This Article
Leave a Comment

Leave a Reply

Your email address will not be published. Required fields are marked *