ಹರ್ಷ ಕೊಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು..!

1 Min Read

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ‌ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಬೆಳಗ್ಗೆಯೇ ಒಬ್ಬ ಆರೋಪಿಯನ್ನ ಬಂಧಿಸಲಾಗಿದೆ. ಈಗ ಮತ್ತಿಬ್ಬರು ಆರೋಪಿಯನ್ನ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಅದರಲ್ಲಿ ಖಾಸಿಫ್ ನನ್ನ ಈಗಾಗಲೇ ವಿಚಾರಣೆ ನಡೆಸಲಾಗಿದೆ. ಕ್ಲಾರ್ಕ್ ಪೇಟೆ ನಿವಾಸಿಯಾಗಿರುವ ಖಾಸಿಫ್ ದಿಡ್ಡ ಪೇಟೆ ಪೊಲೀಸ್ ಠಾಣೆಯಲ್ಲಿ ವಿಚಾತಣೆ ನಡೆಸಲಾಗಿದೆ. ಇನ್ನಿಬ್ಬರು ಆರೋಪಿಗಳನ್ನ ಶಿವಮೊಗ್ಗದ ಹೊರಗಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆ ಈ ಕೊಲೆ ಮಾಡಲಾಗಿದೆ ಎಂದು ಆರೋಪಿ ಖಾಸಿಫ್ ತಿಳಿಸಿದ್ದಾನೆ ಎನ್ನಲಾಗಿದೆ.

ಕೊಲೆಯನ್ನ ಐದು ಜನ ಸೇರಿ ಮಾಡಿದ್ದಾರೆ. ಹೀಗಾಗಿ ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರಯ ಹುಡುಕಾಟ ನಡೆಸುತ್ತಿದ್ದಾರೆ. ಬಂಧಿತರ ಮಾಹಿತಿ ಮೇರೆಗೆ ಪೊಲೀಸರ ಹುಡುಕಾಟ ಆರಂಭವಾಗಿದೆ. ನಿನ್ನೆ ರಾತ್ರಿ ಕ್ಯಾಂಟಿನ್ ಬಳಿ ಟೀ ಕುಡಿಯುತ್ತಾ ನಿಂತಿದ್ದಾಗ ಹರ್ಷನ ಮೇಲೆ ಅಟ್ಯಾಕ್ ಆಗಿದೆ. ಕಾರಿನಲ್ಲಿ ಬಂದ ಐವರು ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ಆಸ್ಪತ್ರೆಗೆ ದಾಖಲಿಸಿದ್ರು, ಚಿಕಿತ್ಸೆ ಫಲಕಾರಿಯಾಗದೆ ಹರ್ಷ ನಿಧನರಾಗಿದ್ದಾರೆ.

ಇಂದು ಹರ್ಷ ಅವರ ಅಂತ್ಯ ಸಂಸ್ಕಾರ ನಡೆಯಲಿದೆ. ಮೃತ ದೇಹವನ್ನ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಶಿವಮೊಗ್ಗದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ಗಲಾಟೆಯಲ್ಲಿ ಸಾಕಷ್ಟು ಜನರಿಗೆ ಗಾಯಗಳಾಗಿರುವ ಘಟನೆಯೂ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *