Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವಾ..? ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು..?

ಹೆಬ್ಬಾಳ್ಕರ್
---Advertisement---

 

 

ಬೆಂಗಳೂರು : ಕಾಂಗ್ರೆಸ್ ನ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯೂ ಕೂಡ ಒಂದು. ಈ ಯೋಜನೆಗೆ ಇತ್ತಿಚೆಗಷ್ಟೇ ಚಾಲನೆ ಸಿಕ್ಕಿದೆ. ಮೊದಲ ಕಂತಿನ ಹಣವನ್ನು ಈಗಾಗಲೇ ಸಾವಿರಾರು ಮಹಿಳೆಯರು ಪಡೆದಿದ್ದಾರೆ. ಆದರೆ ಇನ್ನು ಒಂದಷ್ಟು ಮಂದಿಗೆ ಈ ಯೋಜನೆಯ ಹಣ ಬಂದಿಲ್ಲ. ಇದಕ್ಕೆ ನೂರೆಂಟು ಗಾಸಿಪ್ ಗಳು ಹಬ್ಬುತ್ತಿವೆ. ಸರ್ಕಾರ ಈ ವಿಚಾರದಲ್ಲಿ ಹೆಚ್ಚು ಪರಿಶೀಲನೆ ಮಾಡಿದೆ, ಹೆಚ್ಚಿನ ಹಣ ಟ್ರಾನ್ಸಫರ್ ಆದವರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಬರುವುದಿಲ್ಲ ಎಂದೆಲ್ಲಾ ಸುದ್ದಿಗಳು ಹಬ್ಬುತ್ತಿವೆ. ಆದರೆ‌ ಇದು ಸತ್ಯಕ್ಕೆ ದೂರವಾದ ಮಾತಾಗಿದೆ.

ಈ ಬಗ್ಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮೀ ಯೋಜನೆಗೆ 1.8 ಕೋಟಿ ಅರ್ಜಿ ಸಲ್ಲಿಕೆಯಾಗಿತ್ತು. ಈಗಾಗಲೇ 2,169 ಕೋಟಿ ಹಣ ಬಿಡುಗಡೆಯಾಗಿದೆ. 93 ಲಕ್ಷ ಅರ್ಜಿ ದಾರರಿಗೆ ಹಣ ಜಮಾವಣೆಯಾಗಿದೆ. 5.5 ಲಕ್ಷ ಜನರಿಗೆ ಟಿಬಿಟಿ ಮೂಲಕ ಹಣ ಜಮಾವಣೆಯಾಗಿದೆ.

 

1 ಲಕ್ಷದ 59 ಸಾವಿರ ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. 5 ಲಕ್ಷ 96 ಸಾವಿರ ಅರ್ಜಿದಾರರ ಬ್ಯಾಂಕ್ ಆಧಾರ್ ಜೋಡಣೆಯಾಗಿಲ್ಲ. 1 ಲಕ್ಷದ 75 ಸಾವಿರ ಅರ್ಜಿದಾರರ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಇದೆ. 9,766 ಅರ್ಜಿ ಸೇವಾಸಿಂಧು ವತಿಯಿಂದ ಪುನರ್ ಪರಿಶೀಲನೆ ನಡೀತಿದೆ ಎಂದು ತಿಳಿಸಿದ್ದಾರೆ. ಇನ್ನು ಸೆಪ್ಟೆಂಬರ್​ನಲ್ಲಿ 1ಕೋಟಿ 14ಲಕ್ಷ ಜನ ಗೃಹಲಕ್ಷ್ಮೀ ‌ಫಲಾನುಭವಿಗಳಿದ್ದಾರೆ. ಸೆಪ್ಟೆಂಬರ್​​ನಲ್ಲಿ ಗೃಹಲಕ್ಷ್ಮೀ ಯೋಜನೆಗಾಗಿ 2280 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚುವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment