Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ತುಮಕೂರಿನ ಬಿಜೆಪಿ – ಜೆಡಿಎಸ್ ನಲ್ಲಿ ಬಿರುಕು ಮೂಡಿದೆಯಾ..?

---Advertisement---

ಈ ಪ್ರಶ್ನೆ ಮೂಡುವುದಕ್ಕೆ ಕಾರಣ ತುಮಕೂರಿನಲ್ಲಿ ಟಿಕೆಟ್ ಬಗ್ಗೆ ನೀಡುತ್ತಿರುವ ಹೇಳಿಕೆಗಳು. ಕಳೆದ ವಿಧಾನಸಭಾ ಚುನಾವಣೆಯಿಂದ ಹೊಂದಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಲೋಕಸಭಾ ಚುನಾವಣೆಯಲ್ಲೂ ತಮ್ಮ ಮೈತ್ರಿಯನ್ನು ಮುಂದುವರೆಸಿದಾವೆ. ಯಾವ್ಯಾವ ಕ್ಷೇತ್ರದಲ್ಲಿ ಜೆಡಿಎಸ್ ಗೆ ಟಿಕೆಟ್ ಕೊಡಬೇಕು, ಇನ್ಯಾವ ಕ್ಷೇತ್ರದಲ್ಲಿ ಬಿಜೆಪಿಯನ್ನ ನಿಲ್ಲಿಸಬೇಕು ಎಂಬ ಆಲೋಚನೆ ಬಿಜೆಪಿ ಹಾಗೂ ಜೆಡಿಎಸ್ ವರಿಷ್ಠರ ಮೂಲಕವೇ ಬರುವುದು. ಚುನಾವಣೆಗೂ ಇನ್ನು ಬಹಳ ಸಮಯವಿದೆ. ಎರಡೂವರೆ ವರ್ಷ ಸಮಯವಿರುವಾಗಲೇ ಟಿಕೆಟ್ ಗಾಗಿ ಪೈಪೋಟಿ ಹೆಚ್ಚಾಗಿದೆ.

ಈಗ ಟಿಕೆಟ್ ಫೈಟ್ ಶುರುವಾಗಿರೋದು ತುಮಕೂರು ಜಿಲ್ಲೆಯ ತುರುವೆಕರೆ ಭಾಗದಲ್ಲಿ. ಬಿಜೆಪಿ ಮತ್ತು ಜೆಡಿಎಸ್ ಟಿಕೆಟ್ ಪೈಪೋಟಿ ಈಗಲೇ ಶುರುವಾಗಿದೆ. ತುರುವೆಕೆರೆ ಕ್ಷೇತ್ರದಲ್ಲಿ ಈ ಪೈಪೋಟಿ ಶುರುವಾಗಿದ್ದು ಬಿಜೆಪಿಯ ಮಸಾಲೆ ಜಯರಾಮ್ ಹಾಗೂ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ನಡುವೆ ಈ ಪೈಪೋಟಿ ಏರ್ಪಟ್ಟಿದೆ. ಮಸಾಲೆ ಜಯರಾಮ್ ಬಿಜೆಪಿಯ ಮಾಜಿ ಶಾಸಕರಾಗಿದ್ದಾರೆ. ಕ್ಷೇತ್ರದಲ್ಲಿ ನಾನೇ ಮುಂದಿನ ಅಭ್ಯರ್ಥಿ ಎಂಬುದಾಗಿ ಓಡಾಡ್ತಾ ಇದಾರೆ. ಅಷ್ಟೇ ಅಲ್ಲ ಅದು ಸತ್ಯ ಎಂದೇ ಹೇಳಿಕೆ ನೀಡಿದ್ದಾರೆ.

ನನಗೆ ರಾಜ್ಯ ಹಾಗೂ ಕೇಂದ್ರ ನಾಯಕರು ಕರೆ ಮಾಡಿದ್ದಾರೆ. ಮುಂದಿನ ದಿನದಲ್ಲಿ ಯಾವುದೇ ಒತ್ತಡ ಇಲ್ಲ. ನಾನೇ ಅಭ್ಯರ್ಥಿ ಅಂತ ಆತ್ಮವಿಶ್ವಾಸದಲ್ಲಿ ಹೇಳಿದ್ದಾರೆ. ಜಯರಾಮ್ ಅವರ ಈ ನಡವಳಿಕೆ, ಹೇಳಿಕೆಗಳನ್ನ ಕೇಳಿ ಕೃಷ್ಣಪ್ಪ ಅವರು ಗೊಂದಲದಲ್ಲಿದ್ದಾರೆ. ಸದ್ಯ ಶಾಸಕರಾಗಿರುವ ಕೃಷ್ಷಪ್ಪ ಅವರು ಸಹಜವಾಗಿಯೇ ಮುಂದಿನ ಚುನಾವಣೆಗೂ ಟಿಕೆಟ್ ಆಕಾಂಕ್ಷಿಯಾಗಿರುತ್ತಾರೆ. ಹಾಗಾದ್ರೆ ಮಸಾಲೆ ಜಯರಾಮ್ ಏನು ಹೇಳಿದ್ರು ಅನ್ನೋದನ್ನ ನೋಡಿ, ಸೂರ್ಯ, ಚಂದ್ರ ಇರೋದು ಎಷ್ಟು ಸತ್ಯವೋ ಮುಂದಿನ ದಿನಗಳಲ್ಲಿ ನಾನು ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಅನ್ನೋದು ಅಷ್ಟೇ ಸತ್ಯ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment