ಬಿಜೆಪಿ ಸರ್ಕಾರವಿದ್ದಾಗ ಭ್ರಷ್ಟಾಚಾರದ ಆರೋಪ ದೊಡ್ಡಮಟ್ಟಕ್ಕೆ ಕೇಳಿ ಬಂದಿತ್ತು. ಅಷ್ಟೇ ಅಲ್ಲದೆ ಕಾಂಗ್ರೆಸ್ ಪಕ್ಷ ಕೂಡ ಭ್ರಷ್ಟಾಚಾರದ ಪಕ್ಷ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿತ್ತು. ಇದೀಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಾಗಿರುವಾಗಲೇ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಅದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ.
ಈ ಸಂಬಂಧ ತನಿಖೆ ಮಾಡುವ ವಿಚಾರಕ್ಕೆ ಬಿಜೆಪಿಯ ಬಸನಗೌಡ ಪಾಟೀಲದ ಯತ್ನಾಳ್ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಟ್ವೀಟ್ ಮಾಡುವ ಮೂಲಕ ನಿಮ್ಮ ಬ್ರದರ್ ವಿರುದ್ಧ ತನಿಖೆ ಮಾಡಿಸ್ತೀರಾ ಎಂದು ಕೇಳಿದ್ದಾರೆ.
ಬಿಜೆಪಿ ಸರ್ಕಾರದ ಹಗರಣಗಳನ್ನು ನ್ಯಾಯ ಮೂರ್ತಿಯವರ ನೇತೃತ್ವದ ಆಯೋಗದ ಮೂಲಕ ತನಿಖೆ ಮಾಡಿಸುತ್ತೇವೆ ಎಂದಿದ್ದ ಸಿದ್ದರಾಮಯ್ಯನವರು ಈಗ ಗುತ್ತಿಗೆದಾರರು ಆರೋಪ ಮಾಡಿರುವ ಅವರ “ಬ್ರದರ್” ವಿರುದ್ಧ ತನಿಖೆ ಮಾಡಿಸುತ್ತಾರಾ ?
ಗುತ್ತಿಗೆದಾರರು ನೊಣವಿನಕೆರೆ ಅಜ್ಜಯ್ಯನವರ ಮಠಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಸವಾಲೆಸಿರುವುದು ನೋಡಿದರೆ “ಬ್ರದರ್” ಡಿಮ್ಯಾಂಡ್ ಗುತ್ತಿಗೆದಾರರಿಗೆ ಬಹಳ ಸಂಕಷ್ಟಕ್ಕೆ ದೂಡಿದೆ.
ಲೋಕಸಭೆ ಚುನಾವಣೆಗೆ ಎಷ್ಟು ಫಿಕ್ಸ್ ಮಾಡಿದ್ದೀರಿ @siddaramaiah ನವರೇ? ಅಥವಾ ನಿಮ್ಮ ಗಮನಕ್ಕೆ ಬಾರದೆ ನಿಮ್ಮ “ಬ್ರದರ್” ನಿಮ್ಮನ್ನೂ ಮೀರಿಸಿದ್ದಾರಾ? ಕ್ರಮಕೈಗೊಳ್ಳುವಿರಾ? ಅಥವಾ ಅವರು ಗುತ್ತಿಗೆದಾರರೇ ಅಲ್ಲ ಅಂತ ಸರ್ಟಿಫಿಕೇಟ್ ನೀಡುತ್ತೀರಾ! ಎಂದಿದ್ದಾರೆ.