Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಾಸನ : ಅ.29ಕ್ಕೆ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬಾ ಜಾತ್ರಾ ಮಹೋತ್ಸವ

---Advertisement---

ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಶ್ರೀ ಹಾಸನಾಂಬ ದೇವಿಯ ದೇವಾಲಯದ ಬಾಗಿಲನ್ನು ಅ.29 ರಂದು ತೆರೆದು ನವೆಂಬರ್ 11 ರಂದು ಬಾಗಿಲು ಮುಚ್ಚಲಾಗುವುದು, ಸಾರ್ವಜನಿಕರಿಗೆ ಮೊದಲ ದಿನ ಮತ್ತು ಕೊನೆಯ ದಿನ ದೇವಿ ದರ್ಶನಕ್ಕೆ ಅವಕಾಶ ಇರುವುದಿಲ್ಲ, ಭಕ್ತಾಧಿಗಳಿಗೆ ಸುರಕ್ಷತೆ ಮತ್ತು ಸುಗಮ ದರ್ಶನಕ್ಕೆ ಅವಕಾಶ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ದೇವರ ಜಾತ್ರಾ ಮಹೋತ್ಸವ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು ದೇವಾಲಯದ ಒಳಗೆ ಮತ್ತು ಹೊರ ಆವರಣದಲ್ಲಿ ಮತ್ತು ದೇವಾಲಯದ ಸುತ್ತ ಮುತ್ತ ಮತ್ತು ಭಕ್ತಾಧಿಗಳು ದೇವಿ ದರ್ಶನಕ್ಕೆ ಸಾಗುವ ಸರತಿ ಸಾಲಿನಲ್ಲಿ, ಹಾಗೂ ವಾಹನಗಳ ನಿಲುಗಡೆ ಸ್ಥಳಗಳಲ್ಲಿಯೂ ಯಾವುದೇ ಅಗ್ನಿ ಅವಘಡಗಳಿಗೆ ಆಸ್ಪದವಿಲ್ಲದಂತೆ ಎಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಹೆಚ್ಚಿನ ಅಗ್ನಿಶಾಮಕ ವಾಹನಗಳು ಅಗತ್ಯವಿದ್ದಲ್ಲಿ ಅಕ್ಕಪಕ್ಕದ ಜಿಲ್ಲೆಗಳಿಂದ ಪಡೆಯಲು ಸೂಚನೆ ನೀಡಿದರು.

ವಿದ್ಯುತ್ ಅವಘಡಗಳು ಸಂಭವಿಸದAತೆ ಮುನ್ನೆಚ್ಚರಿಕೆ ವಹಿಸಬೇಕು ಯಾವುದನ್ನು ಹಗುರವಾಗಿ ತೆಗೆದುಕೊಳ್ಳಬಾರದು ಭಕ್ತಾದಿಗಳು ಸರತಿ ಸಾಲಿನಲ್ಲಿ ಸಾಗುವ ಸ್ಥಳ, ವೇದಿಕೆ ಕಾರ್ಯಕ್ರಮದ ಸ್ಥಳ ಹಾಗೂ ಜನದಟ್ಟಣೆ ಇರುವ ಸ್ಥಳಗಳಲ್ಲಿ ಅತ್ಯಂತ ಜಾಗರೂಕತೆಯಿಂದ ನಿರ್ವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಭೇಟಿ ನೀಡಿ ಪ್ರಮಾಣಿಕರಿಸುವಂತೆ ನಿರ್ದೇಶನ ನೀಡಿದರಲ್ಲದೆ, ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಲು ಸೂಚನೆ ನೀಡಿದರು.

ಭಕ್ತಾಧಿಗಳ ಸುರಕ್ಷತೆ ದೃಷ್ಟಿಯಿಂದ ಯಾವುದನ್ನು ಉದಾಸೀನ ಮಾಡಬಾರದು ಎಂದ ಅವರು ಏನೇ ಸಮಸ್ಯೆ ಇದ್ದರೂ ತಕ್ಷಣ ತಮ್ಮ ಗಮನಕ್ಕೆ ತನ್ನಿ ಎಂದು ತಿಳಿಸಿದರು.

ಭಕ್ತಾದಿಗಳು ಸರತಿ ಸಾಲಿನಲ್ಲಿ ಸಾಗುವ ಸಂದರ್ಭದಲ್ಲಿ ಏನೇ ಆರೋಗ್ಯ ಸಮಸ್ಯೆಗಳು ಕಂಡು ಬಂದರೂ ತುರ್ತು ಚಿಕಿತ್ಸೆ ನೀಡಲು ಯಾವುದೇ ತೊಂದರೆಯಾಗದAತೆ ತಕ್ಷಣ ಅವರನ್ನು ಅಂಬುಲೆನ್ಸ್ ನಲ್ಲಿ ಕರೆದೊಯ್ಯಲು ರೂಟ್ ಮ್ಯಾಪ್ ಸಿದ್ಧಪಡಿಸಿಕೊಂಡು ಸಿದ್ಧರಾಗಿರಬೇಕು. ಹಿಮ್ಸ್ ನಲ್ಲಿ ತಕ್ಷಣ ಚಿಕಿತ್ಸೆ ನೀಡಲು ಸಹಕಾರಿಯಾಗುವಂತೆ ಶ್ರೀ ಹಾಸನಾಂಬ ತುರ್ತು ತಂಡ ರಚನೆ ಮಾಡಿ ಎಂದ ಅವರು 24*7 ವೈದ್ಯಕೀಯ ಸೇವೆ ಒದಗಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗೋಲ್ಡನ್ ಅವಧಿಯಲ್ಲಿ ಮನುಷ್ಯನ ಜೀವ ಉಳಿಸುವುದು ಬಹು ಮುಖ್ಯ ಈ ನಿಟ್ಟಿನಲ್ಲಿ ಹೃದಯ ಸಂಬAಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳ ತಜ್ಞ ವೈದ್ಯರನ್ನು ಗುರುತಿಸಿ ಅವರ ಹೆಸರು ಮೊಬೈಲ್ ನಂಬರ್‌ಗಳೊAದಿಗೆ ಪಟ್ಟಿ ಮಾಡಿ ಅಗತ್ಯ ಸಂದರ್ಭ ದಲ್ಲಿ ತಮ್ಮ ಸೇವೆ ಒದಗಿಸಿ ಎಂದು ಮೊದಲೆ ಅವರಿಗೆ ತಿಳಿಸುವಂತೆ ಹೇಳಿದರು.

ತುರ್ತು ಸಂದರ್ಭದಲ್ಲಿ ರಕ್ತನಿಧಿ ಕೇಂದ್ರಗಳಲ್ಲಿ ಅಗತ್ಯ ರಕ್ತ ಲಭ್ಯವಿರುವಂತೆ ನೋಡಿಕೊಳ್ಳಲು ನಿರ್ದೇಶನ ನೀಡಿದರು.

ದೇವಿ ದರ್ಶನಕ್ಕೆ ಆಗಮಿಸುವ ವಿಶೇಷ ಚೇತನರು ಯುಡಿಐಡಿ ಕಾರ್ಡ್,80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಆಧಾರ್ ಕಾರ್ಡ್,ಒಂದು ವರ್ಷದೊಳಗಿನ ಮಕ್ಕಳಿರುವ ತಾಯಂದಿರು ಮಗುವಿನ ಜನನ ಪ್ರಮಾಣ ಪತ್ರ, ಗರ್ಭಿಣಿಯರು ತಾಯಂದಿರ ಕಾರ್ಡ್ ತರಬೇಕು ಎಂದು ತಿಳಿಸಿದರು. ದೇವಿ ದರ್ಶನಕ್ಕೆ ಇವರೊಂದಿಗೆ ಬಂದಿರುವ ಮನೆಯವರು ದರ್ಶನ ಪಡೆದು ಬರುವವರೆಗೆ ಕಾಯಲು ಹೊರಹೋಗುವ ದ್ವಾರದ ಬಳಿ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿರುತ್ತದೆ. ಅವರ ಕಡೆಯವರು ದೇವಿ ದರ್ಶನ ಪಡೆದು ಬಂದ ನಂತರ ಅವರೊಂದಿಗೆ ತೆರೆಳಬಹುದಾಗಿದೆ ಎಂದು ತಿಳಿಸಿದರು.

ದೇವಾಲಯದ ಸುತ್ತ ಮುತ್ತ, ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳಗಳಲ್ಲಿ ಬೀದಿ ನಾಯಿಗಳು ಇರದಂತೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಭಕ್ತಾದಿಗಳಿಗೆ ಪ್ರಸಾದ ವಿತರಣೆಯಲ್ಲಿ ಗುಣಮಟ್ಟದ ಬಗ್ಗೆ ಆಹಾರ ಸುರಕ್ಷತೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸುವಂತೆ ತಿಳಿಸಿದರು.

ಭಕ್ತಾದಿಗಳು ಧರ್ಮ ದರ್ಶನಕ್ಕೆ ಸರತಿ ಸಾಲಿನಲ್ಲಿ ಸಾಗುವಾಗ ಬೇಸರವಾಗದಂತೆ ವೇದಿಕೆಯಲ್ಲಿ ಭಕ್ತಿ ಗೀತೆಗಳನ್ನು ಹಾಡಲು ಪೂರ್ವಸಿದ್ಧತೆಗೆ ಆಡಿಯೋ ಸಿಸ್ಟಂ ಸರಿಯಾಗಿರುವಂತೆ ನೋಡಿಕೊಳ್ಳಲು ನಿರ್ದೇಶನ ನೀಡಿದರಲ್ಲದೆ, ಅಲ್ಲಲ್ಲಿಯೇ ಸ್ಕ್ರೀನ್ ಹಾಕುವಂತೆ ತಿಳಿಸಿದರು.

ನೈವೇದ್ಯಕ್ಕೆ ಹಾಗೂ ದೇವಿ ಅಲಂಕಾರಕ್ಕಾಗಿ ಬಾಗಿಲು ಮುಚ್ಚಿದ ಸಂದರ್ಭದಲ್ಲಿ ಸರತಿ ಸಾಲಿನಲ್ಲಿ ಸಾಗುವ ಭಕ್ತಾದಿಗಳಿಗೆ ಬೇಸರವಾಗದಂತೆ ಮನೋರಂಜನೆ ನೀಡಲು ಉತ್ತಮ ಕಲಾವಿದರನ್ನು ಬಳಸಿಕೊಂಡು ಕಾರ್ಯಕ್ರಮ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹೂವಿನ ಅಲಂಕಾರ ಮಾಡುವಾಗ ಎಚ್ಚರಿಕೆ ವಹಿಸಿ ವಿದ್ಯುತ್ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸುವಂತೆ ತಿಳಿಸಿದರು. ಮಹಾನಗರ ಪಾಲಿಕೆ ಆವರಣದಲ್ಲಿ ಅ.29 ರಂದು ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ ಎಂದು ತಿಳಿಸಿದರು.

ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಈ ನಿಟ್ಟಿನಲ್ಲಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡು ಹಾಜರಾತಿ ಕಡ್ಡಾಯವಾಗಿ ಹಾಕಬೇಕು. ತಾತ್ಕಾಲಿಕ ಶೌಚಾಲಯಗಳ ಸ್ವಚ್ಚತೆ, ದೇವಾಲಯದ ಒಳ ಆವರಣ ಮತ್ತು ಹೊರ ಆವರಣದಲ್ಲಿ, ಸರತಿ ಸಾಲಿನಲ್ಲಿ, ಪ್ರಸಾದ ವಿತರಣೆ ಸ್ಥಳದಲ್ಲಿ ಸ್ವಚ್ಚತೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಸ್ವಚ್ಚತಾ ಕಾರ್ಯದಲ್ಲಿ ತೊಡಗುವ ಸಿಬ್ಬಂದಿಗಳ ಹೆಸರು ಮತ್ತು ಮೊಬೈಲ್ ನಂಬರ್ ಪಟ್ಟಿ ಮಾಡುವಂತೆ ತಿಳಿಸಿದರು.

ರಂಗೋಲಿ ಸ್ಪರ್ಧೆಗೆ ಈಗಾಗಲೇ ನೋಂದಣಿ ಮಾಡಿಕೊಂಡಿರುವ 154 ಸ್ಪರ್ಧಿಗಳಿಗೆ ಮಹಾನಗರ ಪಾಲಿಕೆ ಆವರಣ, ಹೇಮಾವತಿ ಉದ್ಯಾನವನ, ಬಸ್ ನಿಲ್ದಾಣದಲ್ಲಿ ದಿನಾಂಕ ಮತ್ತು ಸಮಯ ನಿಗದಿಪಡಿ ಸಲಾಗುವುದು ಎಂದು ತಿಳಿಸಿದರು.

ಭಕ್ತಾದಿಗಳು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳು,ಪ್ರವಾಸಿ ಮಂದಿರ ಹಾಗೂ ವಾಹನ ನಿಲುಗಡೆ ಸ್ಥಳಗಳಲ್ಲಿ ಪಾದರಕ್ಷೆಗಳನ್ನು ಬಿಡಲು ಸ್ಟ್ಯಾಂಡ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜೊಡೇತ್ತು ಪ್ರದರ್ಶನ ಅ.31 ರಂದು ಸಂಜೆ 4 ಗಂಟೆಗೆ, ನ.3 ರಂದು ಬೆಳಿಗ್ಗೆ 11 ಗಂಟೆಯಿAದ ಟಗರು ಮತ್ತು ಓತ ಪ್ರದರ್ಶನ, ನ.6 ರಂದು ಸಂಜೆ 5 ಗಂಟೆಗೆ ಹಾಲು ಕರೆಯುವ ಸ್ಪರ್ಧೆ, ನ.8 ರಂದು ಬೆಳಿಗ್ಗೆ 11 ಗಂಟೆಯಿAದ ಮುದ್ದು ಸಾಕುಪ್ರಾಣಿಗಳ ಪ್ರದರ್ಶನ ಮಹಾನಗರ ಪಾಲಿಕೆಯ ಆವರಣದಲ್ಲಿ ನಡೆಯಲಿದೆ ಎಂದ ಅವರು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಹಾನಗರ ಪಾಲಿಕೆಯ ಆವರಣದಲ್ಲಿ ಅ.30 ರಂದು ಸಂಜೆ 6 ಗಂಟೆಗೆ ಹಾಸನಾಂಬ ಸಾವಯವ ಮೇಳ ಉದ್ಘಾಟನೆ ಹಾಗೂ ಪರಿಸರ ಸ್ನೇಹಿ ಕೃಷಿಕರ ಬಳಗಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ನ.5 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆಯ ಆವರಣದಲ್ಲಿ ಪಾಕ ಸ್ಪರ್ಧೆ ನಡೆಸಲಾಗು ತ್ತದೆ. ಪಾಕ ಸ್ಪರ್ಧೆಯಲ್ಲಿ ಜಿಲ್ಲೆಯ ಎಂಟು ತಾಲ್ಲೂಕುಗಳ ಪ್ರಾದೇಶಿಕ ವಲಯದ ಸಿಹಿ ಮತ್ತು ಖಾರ ಖಾದ್ಯಗಳನ್ನು ಮನೆಯಲ್ಲಿಯೇ ತಯಾರಿಸಿಕೊಂಡು ಬಂದು ಪ್ರದರ್ಶನ ನೀಡಲು ಅವಕಾಶವಿದ್ದು, ಈ ಮೂಲನೆಲದ ಹಳೇಯ ವಿಶೇಷ ಖಾದ್ಯಗಳನ್ನು ಪ್ರದರ್ಶನ ನೀಡಲು ಇದೊಂದು ಸುವರ್ಣಾ ವಕಾಶ ಎಂದು ಹೇಳಿದರು.

Join WhatsApp

Join Now

Join Telegram

Join Now