Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

---Advertisement---

ಬೆಂಗಳೂರು ಸೆ. 13: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದಾರೆ.

ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಬೇಕಾದ ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಾಗುವವರೆಗೂ ಕಾಯದೇ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ.

ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜೊತೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದು, ಮೃತರ ಕುಟುಂಬದವರ ಜೊತೆಗೂ ಮಾತನಾಡುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...