Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದ್ವೇಷ ಭಾಷಣದ ಹಿನ್ನೆಲೆ : ಮಹೇಶ್ ತಿಮರೋಡಿ ವಿರುದ್ಧ ಎಫ್ಐಆರ್ ದಾಖಲು

---Advertisement---

ಉಡುಪಿ: ನಿನ್ನೆ ಸದನದಲ್ಲೆಲ್ಲಾ ಮಹೇಶ್ ತಿಮರೋಡಿ ಅವರ ವಿಚಾರವೇ ಸಾಕಷ್ಟು ಚರ್ಚಿತ ವಿಷಯವಾಗಿತ್ತು. ಸಿಎಂ ಸಿದ್ದರಾಮಯ್ಯ ಅವರನ್ನೇ ಕೊಲೆಗಾರ ಎಂದಿದ್ದಕ್ಕೆ ಸದನದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಕಾನೂನು ಕ್ರಮ ತೆಗೆದುಕೊಳ್ಳುವುದಕ್ಕೆ ಒತ್ತಾಯ ಕೇಳಿ ಬಂದಿತ್ತು. ಇದೀಗ ಮಹೇಶ್ ತಿಮರೋಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆದರೆ ಅದು ಸೋಷಿಯಲ್ ಮೀಡಿಯಾದಲ್ಲಿ ದ್ವೇಷ ಬಿತ್ತುವ ರೀತಿ ಭಾಷಣ ಮಾಡಿದ್ದರ ಹಿನ್ನೆಲೆ ಮಹೇಶ್ ತಿಮರೋಡಿ ಸೇರಿ ವಸಂತ್ ಗಿಳಿಯಾರ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಗಸ್ಟ್ 16ರಂದು ಫೇಸ್ಬುಕ್ ಪೇಜ್ ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂದೂ ಧರ್ಮದ ನಾಯಕನನ್ನು ಅವಾಚ್ಯ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿ ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇಷ ಭಾವನೆಯನ್ನು ಉಂಟು ಮಾಡಿದ್ದಾರೆ. ಈ ಸಂಬಂಧ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿಯ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ದೂರು ನೀಡಿದ್ದಾರೆ.

ಕೋಟ ವಸಂತ ಗಿಳಿಯಾರ್‌ ಎಂಬುವರ ಫೇಸ್‌ ಬುಕ್‌ ಖಾತೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಮ್ಯಾಪ್‌ನ್ನು ಆಳವಡಿಸಿ ಅಲ್ಲಿರುವ ದೇವಸ್ಥಾನ ಮತ್ತು ಮಸೀದಿಗಳ ಬಗ್ಗೆ ಒಂದು ಪೋಸ್ಟ್ ಹಾಕಿದ್ದು, ಧರ್ಮ ಧರ್ಮಗಳ ಮಧ್ಯ ,ಜಾತಿಗಳ ಮಧ್ಯ, ಸಮುದಾಯಗಳ ಮಧ್ಯ ಎತ್ತಿಕಟ್ಟಿ ಕೋಮು ಗಲಭೆಯನ್ನು ಸೃಷ್ಠಿಸುವಂತ ಧಾರ್ಮಿಕ ಸಂಸ್ಥೆಗಳ ಮೇಲೆ ದಾಳಿಗೆ ಪ್ರಚೋದಿಸುವಂತಹ ಸಂದೇಶವನ್ನು ಹರಿಯ ಬಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೆಂಪು ಮತ್ತು ನೀಲಿ ಬಣ್ಣದಲ್ಲಿ ಗುರುತು ಮಾಡಿದ ನಕ್ಷೆಯನ್ನು ಕೂಡ ಪ್ರಸಾರ ಮಾಡಿದ್ದಾರೆ. ಹೀಗಾಗಿ, ಮಂಗಳೂರಿನ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...