Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಾವೇರಿ: ಹೊಲದಲ್ಲಿ ಮರದ ಕೆಳಗೆ ನಿಂತಿದ್ದ ರೈತ ಸಿಡಿಲು ಬಡಿದು ದುರ್ಮರಣ

---Advertisement---

ಹಾವೇರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದಿಢೀರನೆ ಅಪ್ಪಳಿಸಿದ ಸಿಡಿಲಿಗೆ ಸಿಲುಕಿ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಿಕ್ಕಮರಳಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ರೈತನನ್ನು ದೊಡ್ಡ ಹನುಮಂತಪ್ಪ ನಿಂಗಪ್ಪ ರಿತ್ತಿ (60) ಎಂದು ಗುರುತಿಸಲಾಗಿದೆ. ದೊಡ್ಡ ಹನುಮಂತಪ್ಪ ಅವರು ಎಂದಿನಂತೆ ತಮ್ಮ ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಮಳೆಯ ಮುನ್ಸೂಚನೆ ಕಂಡು, ರಕ್ಷಣೆ ಪಡೆಯಲು ಜಮೀನಿನಲ್ಲಿದ್ದ ಮರದ ಕೆಳಗೆ ನಿಂತಿದ್ದರು. ದುರದೃಷ್ಟವಶಾತ್ ಅದೇ ವೇಳೆ ಮರಕ್ಕೆ ಸಿಡಿಲು ಬಡಿದ ಪರಿಣಾಮ, ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join WhatsApp

Join Now

Join Telegram

Join Now