ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಯುವುದನ್ನು ಖಂಡಿಸಿ ನಾಳೆ ರೈತರೆಲ್ಲಾ ಸೇರಿ ಬೆಂಗಳೂರು ಬಂದ್ ಮಾಡುತ್ತಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
‘ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ. ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ.
ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ. ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ.ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನ ಮಂತ್ರಿ ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ.
ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ’ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…