Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೊಲೀಸರನ್ನು ನಾಯಿಗಳೆಂದ ಗೃಹಸಚಿವರ ಮೇಲೆ ಹೆಚ್ಡಿಕೆ ಗರಂ..!

Facebook
Twitter
Telegram
WhatsApp

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸರನ್ನು ನಾಯಿಗಳೆಂದು ಮಾತನಾಡಿದ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿ ಆಕ್ರೋಶ ಹೊರಹಾಕಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಪೊಲೀಸರ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ. ಕಳೆದ ಮೂರು ವರ್ಷದಿಂದ ಅವರದ್ದೇ ಸರ್ಕಾರವಿದೆ ರಾಜ್ಯದಲ್ಲಿ. ಲಂಚದ ಬಗ್ಗೆ ಗೊತ್ತಿದ್ರೆ ಕ್ರಮ ತೆಗೆದುಕೊಳ್ಳಲಿ. ಅವರು ಹುದ್ದೆ ಪಡೆಯಬೇಕಾದ್ರೆ ಅವರು ಲಂಚ ಕೊಟ್ಟಿರ್ತಾರೆ. ಹೀಗಾಗಿ ಅವರು ಕೆಲಸ ಮಾಡುವಾಗ ಲಂಚ ತೆಗೆದುಕೊಳ್ಳುತ್ತಾರೆ.

ಈ ಕೇಸಲ್ಲಿ ತಪ್ಪಿದ್ದವರನ್ನು ಸಸ್ಪೆಂಡ್ ಮಾಡಲಿ. ಅದನ್ನ ಬಿಟ್ಟು ಈ ರೀತಿ ಮಾತಾಡಿದರೆ ಆ ಹುದ್ದೆಗೆ ಸರಿಬರಲ್ಲ.  ಪೊಲೀಸರನ್ನ ಸಂಬಳ ತೆಗೆದುಕೊಳ್ತೀರಾ ಅಂತೀರಲ್ಲ. ಹಾಗಾದ್ರೆ ಆ ಸಂಬಳವನ್ನೇನು ನಿಮ್ಮ ಮನೆಯಿಂದ ತಂದುಕೊಡ್ತೀರಾ. ಜನರ ತೆರಿಗೆಯಿಂದ ಕೊಡ್ತಿರುವ ಸಂಬಳವದು. ಪೊಲೀಸರಿಗೆ ಜನರಿಗೆ ರಕ್ಷಣೆ ಕೊಡುವಂತೆ ಹೇಳಬೇಕು. ಅದನ್ನ ಬಿಟ್ಟು ಈ ರೀತಿ ಮಾತಾಡಬಾರದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!