in

ರಾಷ್ಟ್ರೀಯ ಪಕ್ಷ.. ಕನ್ನಡ ಪ್ರೇಮ : ಕುಮಾರಸ್ವಾಮಿ ಟ್ವೀಟ್ ಒಮ್ಮೆ ಓದಲೇ ಬೇಕು..!

suddione whatsapp group join

ಬೆಂಗಳೂರು: ಕನ್ನಡ ಧ್ವಜ ಸುಟ್ಟವರಿಗೆ ಶಿಕ್ಷೆ ಆಗಲೇಬೇಕೆಂಬುದು ಕನ್ನಡಿಗರ ಒತ್ತಾಯ. ರಾಯಣ್ಣನ ಮೂರ್ತಿ ವಿರೂಪಗೊಳಿಸಿ ವಿಕೃತಿಗಳಿಗೆ ತಕ್ಕ ಶಾಸ್ತಿಯಾಗಬೇಕೆಂಬುದೇ ಕನ್ನಡಿಗರ ಒತ್ತಾಯ. ಇಲ್ಲಿ ಕನ್ನಡ ಭಾಷೆಗೆ ಅವಮಾನ ಕೂಡ ಆಗಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದು ನಾನು ಹಿಂದೆಯೇ ಹೇಳಿದ್ದೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ಬೆಳಗಾವಿಯಲ್ಲಿ ನಡೆದ ವಿಕೃತಿ ಬಗ್ಗೆ, ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣ ಅವರಿಗಾದ ಅಪಚಾರದ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳ ಬದ್ಧತೆ ಬಗ್ಗೆ ಈಗ ಪ್ರಶ್ನೆ ಉಂಟಾಗಿದೆ.

ಮಾತೆತ್ತಿದರೆ ರಾಷ್ಟ್ರದ ಸಮಗ್ರತೆಯ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕವು 30 ರಾಜ್ಯಗಳಲ್ಲಿ ಒಂದು ರಾಜ್ಯವಷ್ಟೆ. ಕನ್ನಡವು ದೇಶ ಭಾಷೆಗಳಲ್ಲಿ ಒಂದು ಭಾಷೆ ಮಾತ್ರ. ಆದರೆ ನಮಗೆ ಕರ್ನಾಟಕವೇ ಕರ್ಮಭೂಮಿ. ಕನ್ನಡವೇ ತಾಯಿ. ನಾವು ಕನ್ನಡಮ್ಮನ ಕರುಳಬಳ್ಳಿಗಳು.

ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕ ಕೇವಲ ಚುನಾವಣೆ ಬಂದಾಗ ವೋಟ್ ಮಾಡುವ ಮತಯಂತ್ರ ಹಾಗೂ ತೆರಿಗೆ ರೂಪದಲ್ಲಿ ಕೇಂದ್ರದ ಖಜಾನೆ ತುಂಬುವ ಅಕ್ಷಯ ಪಾತ್ರೆ. ಆದರೆ; ನಮಗೆ ನೆರೆ, ಬರ ಬಂದಾಗ ಅವರ ಮುಂದೆಯೇ ಭಿಕ್ಷೆಗೆ ನಿಲ್ಲಬೇಕು! ಇದೆಂಥಾ ವಿಪರ್ಯಾಸ?.

ಗಡಿ, ಭಾಷೆ, ಜಲದ ಪ್ರಶ್ನೆ ಬಂದಾಗ ಆ ಪಕ್ಷಗಳ ಆದ್ಯತೆ ಕನ್ನಡ-ಕರ್ನಾಟಕ ಅಲ್ಲ. ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಬಂದವರನ್ನು ಸಹಿಸಿಕೊಳ್ಳುತ್ತಿದ್ದೇವೆ. ಕನ್ನಡಿಗರ ತೆರಿಗೆ ಹಣದಲ್ಲಿ ಜಾರಿ ಮಾಡಿದ ಯೋಜನೆ, ರಸ್ತೆ, ಸೇತುವೆಗಳಿಗೆ ಮಹಾರಾಷ್ಟ್ರದಲ್ಲಿ ಹುಟ್ಟಿದವರ ಹೆಸರಿಟ್ಟು ಔದಾರ್ಯ ತೋರುತ್ತಿದ್ದೆವೆ. ಇದು ಇನ್ನೆಷ್ಟು ದಿನ?.

ಬೆಳಗಾವಿಯ ಒಂದು ಹಳ್ಳಿಯಲ್ಲಿ ಹುಟ್ಟಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ, ಅದೇ ಬ್ರಿಟಿಷರು ಬಿಗಿದ ನೇಣು ಹಗ್ಗಕ್ಕೆ ಕೊರಳು ಕೊಟ್ಟ ಸಂಗೊಳ್ಳಿ ರಾಯಣ್ಣ ಅವರನ್ನು ಅಪಮಾನಿಸುತ್ತಾರೆ. ಅದೇ ಮೊಘಲರ ವಿರುದ್ಧ ಹೋರಾಡಿದ ಶಿವಾಜಿಯನ್ನು ಕೊಂಡಾಡುತ್ತಾರೆ. ಇದೆಂಥಾ ದೇಶಪ್ರೇಮ? ರಾಷ್ಟ್ರಪ್ರೇಮದಲ್ಲೂ ಬೇಧ ಭಾವವೇ?.

2006ರಲ್ಲಿ ಶಿವಸೇನೆ-ಎಂಇಎಸ್ ಗಡಿತಂಟೆ ಮಾಡಿದಾಗ, ಆಗ ಕೇಂದ್ರದಲ್ಲಿ ಗೃಹಮಂತ್ರಿಯಾಗಿದ್ದ ಅದೇ ರಾಜ್ಯದ ನಾಯಕರು ಬೆಳಗಾವಿ ಮೇಲೆ ಕಣ್ಣು ಹಾಕಿದಾಗ, ಅಲ್ಲಿ ವಿಧಾನಕಲಾಪ ನಡೆಯಿತು. ಸುವರ್ಣಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆಯೂ ಆಯಿತು. ಇದು ಕನ್ನಡದ ಒಂದು ಸಣ್ಣ ಪಕ್ಷಕ್ಕೆ ಇದ್ದ ಬದ್ಧತೆ. ಈ ಎದೆಗಾರಿಕೆ ರಾಷ್ಟ್ರೀಯ ಪಕ್ಷಗಳಿಗೆ ಏಕಿಲ್ಲ?.

ನಮ್ಮ ರಾಯಣ್ಣರ ಪ್ರತಿಮೆ ಮೇಲೆ ʼಕೈʼ ಇಟ್ಟವರ ಮೇಲೆ ಕರುಣೆ ಯಾಕೆ? ಎಂಇಎಸ್ ಬಗ್ಗೆ ಎರಡು ನಾಲಗೆಯಲ್ಲಿ ಮಾತನಾಡುವ ʼಕೈಚಳಕʼದ ಮರ್ಮವೇನು? ಮಸೂದೆಗಳನ್ನು ಇಟ್ಟುಕೊಂಡು ಕನ್ನಡದ ಆಸ್ಮಿತೆಯ ಮೇಲಾದ ದಾಳಿಯನ್ನು ʼವಿಷಯಾಂತರʼ ಮಾಡುವ ಹುನ್ನಾರ ಏಕೆ? ಎಂದು ಪ್ರಶ್ನಿಸಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಈ ರಾಶಿಯವರಿಗೆ ವ್ಯಾಪಾರಿಗಳಿಂದ ಅಧಿಕ ವರಮಾನ!

ಆಕಾಶದಲ್ಲಿ ಸಂಜೆ ಕಂಡ ಸಾಲು ನಕ್ಷತ್ರ ನೋಡಿ ಆಶ್ಚರ್ಯಗೊಂಡಿದ್ದೀರಾ..? ಇಲ್ಲಿದೆ ನೋಡಿ ಕಾರಣ..!