ಕೋಲಾರ: ರಾಜ್ಯದಲ್ಲಿ ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದೆ. ಆದ್ರೆ ಈ ಮಧ್ಯೆ ಹಿಜಾಬ್ ಗಲಾಟೆ ಇನ್ನು ಮುಗಿದಿಲ್ಲ. ಪರೀಕ್ಷೆಗಿಂತ ಹಿಜಾಬೇ ಮುಖ್ಯ ಅಂತ ಕೆಲ ವಿದ್ಯಾರ್ಥಿಗಳು ಹಠ ಮಾಡಿ ಕುಳಿತಿದ್ದಾರೆ.
ಇತ್ತ ಸರ್ಕಾರ ಯಾವುದೇ ಕಾರಣಕ್ಕೂ ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಕೂರಿಸಲ್ಲ. ಸಮವಸ್ತ್ರ ಕಡ್ಡಾಯವಾಗಿದೆ ಎಂದು ಆದೇಶ ಹೊರಡಿಸಿದೆ. ಜೊತೆಗೆ ಹಿಜಾಬ್ ಗಲಾಟೆಯಿಂದ ಪರೀಕ್ಷೆಗೆ ತಪ್ಪಿಸಿಕೊಂಡರೆ ಮತ್ತೆ ಪರೀಕ್ಷೆಗೆ ಅವಕಾಶ ನೀಡಲ್ಲ ಎಂದು ಸೂಚಿಸಲಾಗಿದೆ.
ಈ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇಂಥ ಸ್ಥಿತಿ ಬರುತ್ತೆ ಅಂತ ಊಹಿಸಿರಲಿಲ್ಲ. ಶಾಲಾ ಮಕ್ಕಳಲ್ಲೂ ವಿಷ ಬೀಜ ಬಿತ್ತಲಾಗುತ್ತಿದೆ. ಮಕ್ಕಳಿಗೆ ಮುಕ್ತವಾಗಿ ಪರೀಕ್ಷೆ ಬರೆಯಲು ಬಿಡಬೇಕು. ಭವಿಷ್ಯದ ದೃಷ್ಟಿಯಿಂದ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.