Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಕ್ಸಮರ,ಸಿದ್ದುಗೆ ತಿರುಗೇಟು ಕೊಟ್ಟ ಹೆಚ್ಡಿಕೆ

Facebook
Twitter
Telegram
WhatsApp

ಬೆಂಗಳೂರು: ಉಪ ಚುನಾವಣೆಗಳ ಬೆನ್ನಲ್ಲೇ ಶುರುವಾಗಿರುವ ಮಾಜಿ ಮುಖ್ಯಮಂತ್ರಿಗಳ ನಡುವಿನ ವಾಕ್ಸಮರ ಮುಂದುವರಿದಿದೆ. ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ವಿಚಾರವಾಗಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಗಳಿಗೆ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಅಲ್ಪಸಂಖ್ಯಾತರನ್ನು ಪೇಟೆಂಟ್ ತೆಗೆದುಕೊಂಡವರಂತೆ ಬಿಂಬಿಸಿಕೊಳ್ಳುವ ಸಿದ್ದರಾಮಯ್ಯ, ತಮ್ಮದೇ ಪಕ್ಷದಲ್ಲಿ ಮುಸ್ಲಿಂ ನಾಯಕರನ್ನು ಮುಳುಗಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಸಿದ್ದರಾಮಯ್ಯ ಅವರು ಸ್ವಪಕ್ಷದಲ್ಲಿರುವ ಮುಸ್ಲಿಂ ಮುಖಂಡರನ್ನು ಸೋಲಿಸಲು ಯಾವ ತಂತ್ರಗಳನ್ನೆಲ್ಲ ಮಾಡಿದ್ದಾರೆ ಎಂದು ಸುದೀರ್ಘ ಟ್ವೀಟ್‌ನಲ್ಲಿ ಕುಮಾರಸ್ವಾಮಿ ಸರಣಿ ಆರೋಪಗಳನ್ನು ಮಾಡಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ‘ಸಿದ್ದಹಸ್ತ’ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ ಎಂದು ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ‘ಅಹಿಂದ’ ಎಂದು ಜನರನ್ನು ‘ಅಡ್ಡದಾರಿ’ ಹಿಡಿಸಿದ ‘ಸಿದ್ದಹಸ್ತ ಶೂರರು’ ತಮ್ಮ ಸ್ವಪಕ್ಷದಲ್ಲೇ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ‘ಅಲ್ಪಸಂಖ್ಯಾತರ ಅಂತ್ಯ ರಾಜಕಾರಣ’ದ ಟರ್ಮಿನೇಟರ್ ಆಗಿ ಹೊರಹೊಮ್ಮಿದ್ದಾರೆ. ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ‘ಸಿದ್ದಹಸ್ತ ಸೂತ್ರಧಾರಿ’ಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್‌ನಲ್ಲಿ ನಡೆದಿರುವ ಅಲ್ಪಸಂಖ್ಯಾತ ನಾಯಕರ ‘ರಾಜಕೀಯ ನರಮೇಧ’ಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ ಎಂದು ಎಚ್‌ಡಿಕೆ ಹೇಳಿದ್ದಾರೆ.

ಪರಿಷತ್ ಚುನಾವಣೆ ತಂತ್ರ
2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಬೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ!! ಇಲ್ಲಿ ಸರಡಗಿ ಸೋಲಿಗೆ, ಬೈರತಿ ಸುರೇಶ್ ಗೆಲುವಿಗೆ ಕಾರಣವಾದ ‘ಸಿದ್ದಸೂತ್ರ’ ಹಣೆದಿದ್ದು ಯಾರು? ಎಂದು ತಮ್ಮದೇ ಪಕ್ಷದ ಅಲ್ಪಸಂಖ್ಯಾತ ಅಭ್ಯರ್ಥಿಯ ಸೋಲಿಗೆ ಸಿದ್ದರಾಮಯ್ಯ ಕಾರಣರಾಗಿದ್ದರು ಎಂದು ಆರೋಪಿಸಿದ್ದಾರೆ.

ಷರೀಫ್ ಮಗನಿಗೆ ಸೋಲು
ಈ ‘ಸಿದ್ದಹಸ್ತರ ಸಿದ್ದಸೂತ್ರ’ ಅಲ್ಲಿಗೇ ನಿಲ್ಲುವುದಿಲ್ಲ. 2016ರಲ್ಲಿ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಅಧಿಕೃತ ಟಿಕೆಟ್ ಕೊಡುತ್ತದೆ. ಆಗ ಬೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರನ್ನೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ, ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ! 2023ರ ಚುನಾವಣೆಯಲ್ಲಿ ಬೈರತಿ ಸುರೇಶ್‌ ಅವರಿಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು? ಎಂದು ಪ್ರಶ್ನಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆ ನಂತರ ತಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್‌ಗೆ ಶೋಕಾಸ್ ನೊಟೀಸ್ ನೀಡಿ, ತಮ್ಮನ್ನು ಬಹಿರಂಗವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಅಪಮಾನ ಮಾಡುತ್ತಾರೆ ಸಿದ್ದಹಸ್ತರು. ಕೊನೆಗೆ ರೋಷನ್ ಬೇಗ್ ಕಾಂಗ್ರೆಸ್ ಪಕ್ಷದಿಂದಲೇ ದೂರವಾಗುತ್ತಾರೆ.
ಮೈಸೂರಿನ ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಲೀಂ ಮೊಹಮದ್ ಬಲಿ
ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ‘ರಸಸ್ವಾದ’ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ? ಎಂದು ಸಲೀಂ ಹಾಗೂ ವಿಎಸ್ ಉಗ್ರಪ್ಪ ನಡುವಿನ ಸಂಭಾಷಣೆ ವಿಡಿಯೋ ವೈರಲ್ ಆದ ಬಳಿಕ ಸಲೀಂ ಅವರನ್ನು ಅಮಾನತುಗೊಳಿಸಿ, ಉಗ್ರಪ್ಪ ಅವರಿಗೆ ನೋಟಿಸ್ ನೀಡಿದ್ದನ್ನು ಪ್ರಸ್ತಾಪಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜಕಾರಣ ಮುಸ್ಲಿಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ.
ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್ ಷರೀಫರ ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್ ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್ ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ 2 ಹಕ್ಕಿ ಹೊಡೆದು ‘ಕಿರಾತಕ ರಾಜಕಾರಣ’ ಮಾಡಿದಿರಿ.
ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ.

ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ ಜನತಾಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ ಎಂದು ‘ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರ ಟರ್ಮಿನೇಟರ್ ಸಿದ್ದಹಸ್ತ ಸಿದ್ದಸೂತ್ರಧಾರ’ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

IND vs AUS TEST | ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಪಟೆದ ಜಸ್ಪ್ರೀತ್ ಬುಮ್ರಾ : ಈ ಸಾಧನೆ ಮಾಡಿದ ಇತರ ಭಾರತೀಯ ಆಟಗಾರರ ಮಾಹಿತಿ ಇಲ್ಲಿದೆ…!

ಸುದ್ದಿಒನ್ | ಟೀಂ ಇಂಡಿಯಾ ವೇಗಿ ಮತ್ತು ನಾಯಕ ಜಸ್ಪ್ರೀತ್ ಬುಮ್ರಾ ಅವರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್‌ನಲ್ಲಿ ಶನಿವಾರ ಟೆಸ್ಟ್ ಕ್ರಿಕೆಟ್‌ನಲ್ಲಿ ಐದು ವಿಕೆಟ್‌ಗಳನ್ನು ಗಳಿಸುವ ಮೂಲಕ ಇತಿಹಾಸ ದಾಖಲಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ

ಮೂರನೇ ಬಾರಿಗೆ ಸೋತ ನಿಖಿಲ್ ಕುಮಾರಸ್ವಾಮಿ…!

ಸುದ್ದಿಒನ್ | ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಜೊತೆಗೆ ದೇಶಾದ್ಯಂತ ವಿವಿಧ ರಾಜ್ಯಗಳ 48 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಿತು. ಕರ್ನಾಟಕದಲ್ಲಿ ಮೂರು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

error: Content is protected !!