Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಡಿಎಸ್ ಪಕ್ಷವು ಒಕ್ಕಲಿಗರು, ಲಿಂಗಾಯತರ ಪಕ್ಷ ಎಂದ ಡಿಕೆಶಿಗೆ ಖಡಕ್ ಪ್ರಶ್ನೆ ಹಾಕಿದ ಹೆಚ್’ಡಿಕೆ

Facebook
Twitter
Telegram
WhatsApp

ಬೆಂಗಳೂರು: ಜೆಡಿಎಸ್ ಕೇವಲ ಒಕ್ಕಲಿಗ, ಲಿಂಗಾಯತ ಸಮುದಾಯಕ್ಕೆ ಮಾತ್ರ ಆದ್ಯತೆ ನೀಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಬಿಡದಿಯ ತೋಟದಲ್ಲಿ ನಡೆದಿರುವ ಜನತಾ ಪರ್ವ 1.O ಹಾಗೂ ಮಿಷನ್ 123 ಯ ಆರನೇ ದಿನದ ಕಾರ್ಯಾಗಾರದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ನೀವು ಎಷ್ಟು ಸಮುದಾಯಗಳಿಗೆ ಗೌರವ ಕೊಟ್ಟಿದ್ದೀರಿ? ನಿಮ್ಮ ಪಕ್ಷದ ದಲಿತ ಸಮಾಜದ ನಾಯಕರನ್ನು ಚುನಾವಣೆಯಲ್ಲಿ ಸೋಲಿಸಿದವರು ಯಾರು? ಪಟ್ಟಿ ದೊಡ್ಡದಾಗಿದೆ, ಒಮ್ಮೆ ನೋಡಿಕೊಳ್ಳಿ ಎಂದು ಹೇಳಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ಅಡ್ಡಿ ಬರುತ್ತಾರೆಂದು ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಸೋಲಿಗೆ ಕಾರಣ ಯಾರು? ಧರ್ಮಸಿಂಗ್ ಅವರ ಸೋಲಿಗೆ ಕಾರಣ ಯಾರು? ಕೋಲಾರದಲ್ಲಿ ಕೆ.ಹೆಚ್. ಮುನಿಯಪ್ಪ ಅವರನ್ನು ಸೋಲಿಸಿದವರು ಯಾರು? ಬಿಜೆಪಿಗೆ ಶಕ್ತಿಯೇ ಇಲ್ಲದ ಹಾಗೂ ಕಾರ್ಪೊರೇಟರ್ ಕೂಡ ಆಗಲು ಆಗದಂತಹ ವ್ಯಕ್ತಿಯನ್ನು ಕರೆತಂದು ಕೋಲಾರದಲ್ಲಿ ನಿಲ್ಲಿಸಿ ಪ್ರತ್ಯಕ್ಷವಾಗಿ, ಬೆಂಬಲ ನೀಡಿದವರು ಯಾರು? ರಮೇಶ್ ಕುಮಾರ್ ಯಾರ ಪರ ಕೆಲಸ ಮಾಡಿದರು. ಅಲ್ಲಿನ ಬಿಜೆಪಿ ಸಂಸದರ ಆಯ್ಕೆ ಹಿಂದೆ ಯಾರಿದ್ದಾರೆ? ಎಂದು ಡಿಕೆಶಿಗೆ ಪ್ರಶ್ನೆ ಮಾಡಿದರು.

ಕಾಂಗ್ರೆಸ್ ಪಕ್ಷದ ದಲಿತ ನಾಯಕರ ಸೋಲಿಗೆ ಅವರೇ ಕಾರಣವಲ್ಲವೇ? ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುಡುಗು, ಸಿಡಿಲು ಬಡಿತ: ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು

ಚಿತ್ರದುರ್ಗ. ಏ.25 : ಗುಡುಗು, ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ)ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿ ತಿಳಿಸಿದ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೆ ಪಾಲನೆ ಮಾಡಬೇಕು

ಕಾಯಕ ಸಮುದಾಯ ಬಿ.ಎನ್.ಚಂದ್ರಪ್ಪ, ಪ್ರಭಾ ಮಲ್ಲಿಕಾರ್ಜನ್ ರವರನ್ನು ಬೆಂಬಲಿಸಲಿ : ಎನ್.ಡಿ.ಕುಮಾರ್ ಮನವಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ.25 : ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಎನ್.ಚಂದ್ರಪ್ಪ, ಮತ್ತು ದಾವಣಗೆರೆ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜನ್ ಅವರನ್ನು

ದೇಶದ ಅಭಿವೃದ್ಧಿಗಾಗಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ :  ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 25:  ದೇಶದ ಅಭಿವೃದ್ಧಿಗಾಗಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ದೇಶದ ಪ್ರತಿಯೊಬ್ಬ ವ್ಯಕ್ತಿ ಮೇಲಿದೆ.

error: Content is protected !!