Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

RSS ಶಾಖೆಗೆ ಬಂದು ಸಂಶೋಧನೆ ಮಾಡಿ ಎಂದ ಸಿ.ಟಿ.ರವಿಗೆ ತಿರುಗೇಟು ನೀಡಿದ ಹೆಚ್ಡಿಕೆ

Facebook
Twitter
Telegram
WhatsApp

ಬೆಂಗಳೂರು: RSS ಬಗ್ಗೆ ತಾವು ನೀಡಿದ ಹೇಳಿಕೆಗೆ ಪ್ರತ್ಯುತ್ತರ ನೀಡುವ ಭರದಲ್ಲಿ ಸಂಘದ ಶಾಖೆಗೆ ಬಂದು ಅಧ್ಯಯನ ಮಾಡಿ ಎಂದು ಹೇಳಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಸಿ.ಟಿ ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. RSS ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ. ನಿಮ್ಮ ಸಂಘದೊಳಗಿನ ವಾಸ್ತಾವಾಂಶಗಳನ್ನು ಪ್ರತ್ಯಕ್ಷವಾಗಿ ನೋಡಿದವರೇ ಬರೆದ ಪುಸ್ತಕ ಓದಿ ನನಗೆ ಅಲ್ಲಿನ ವ್ಯವಹಾರಗಳ ವಿರಾಟ್ ದರ್ಶನ ಆಗಿದೆ. ಇನ್ನು ಶಾಖೆಯನ್ನೇ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು. ನೀವೇ ಒಮ್ಮೆ ಊಹಿಸಿ.

ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದೀರಿ. ನಿಮ್ಮ ಪಕ್ಷ ಮತ್ತು ನಿಮ್ಮ ಸರಕಾರದಲ್ಲಿ ತಾಂಡವವಾಡುತ್ತಿರುವ ಅಪರಿಮಿತ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತದ ಬಗ್ಗೆಯೂ ನೀವು ಹೇಳಬೇಕು. ಅದಕ್ಕೂ RSS ಶಾಖೆಯಲ್ಲೇ ತರಬೇತಿ ನೀಡಲಾಯಿತಾ? ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥ ʼಆಪರೇಷನ್ ಕಮಲʼದಂಥ ʼಅನೈತಿಕʼ, ʼನಿರ್ಲಜ್ಜʼ, ʼನೀಚʼ ರಾಜಕಾರಣವನ್ನು RSS ಶಾಖೆಯಲ್ಲೇ ಕಲಿಸಲಾಯಿತಾ ಎಂಬುದನ್ನೂ ನೀವು ಜನರಿಗೆ ಹೇಳಬೇಕು ಸಿ.ಟಿ.ರವಿಯವರೇ?

ಜನರು ಕಣ್ಣೀರಿನಲ್ಲಿ ಕೈತೊಳೆಯುತ್ತಿದಾರೆ. ಇವತ್ತಿನ ಪ್ರಜಾವಾಣಿ ಪತ್ರಿಕೆ ಓದಿ. ಅದರಲ್ಲಿ “ಬದುಕು ಸಾಕೆನಿದೆ-ಭಗವಂತನಿಗೂ ಕರುಣೆ ಇಲ್ಲ” ಎನ್ನುವ ವರದಿ ಇದೆ. ಬೆಂಗಳೂರಿನ ಶ್ರೀನಿವಾಸನಗರದ ಬಿ.ಆರ್.ವಾಸುದೇವ ಎಂಬ ಬೀದಿಬದಿ ವ್ಯಾಪಾರಿ ಹೇಳಿರುವ ಮಾತುಗಳನ್ನು ಒಮ್ಮೆ ಓದಿ. ಆಗಲಾದರೂ ನಿಮ್ಮ ಕಲ್ಲು ಹೃದಯ ಕರಗಬಹುದು.

ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ? ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ RSS ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ?

ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೆ ಹೊರತು ಬದುಕಿಗೇ ಬೆಂಕಿ ಇಡಬಾರದು. ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು, ಅದಕ್ಕೆ ಕೊಳ್ಳಿ ಇಡಬಾರದು. RSS ಹುಟ್ಟಿದಾಗಿನಿಂದಲೂ ಏನೆಲ್ಲ ಮಾಡಿಕೊಂಡು ಬಂದಿದೆ ಎನ್ನುವುದು ಜಗತ್ತಿಗೇ ಗೊತ್ತಿರುವ ಸಂಗತಿ.
ಜನ ಪ್ರತಿನಿಧಿಗಳನ್ನು, ಸರಕಾರಗಳನ್ನು, ಆಡಳಿತ ಯಂತ್ರಾಂಗವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥ ಮಾಡಿಕೊಳ್ಳಿ ಸಿ.ಟಿರವಿಯರೇ. ನಾನು ಸತ್ಯದ ಪರ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 09 ರಂದು ಹಿರಿಯೂರು ಬಂದ್

ಹಿರಿಯೂರು, ನವೆಂಬರ್. 25 : ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗಾಯಿತ್ರಿ ಡ್ಯಾಂ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತ ಸಂಘದಿಂದ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರ 160ನೇ ದಿನಕ್ಕೆ ಕಾಲಿಟ್ಟಿತು.

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪ್ರಮಾಣ ಸಮಾರಂಭ : ದಾವಣಗೆರೆ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಬಿ.ಡಿ.ಕುಂಬಾರ್ ಅವರಿಂದ ಉದ್ಘಾಟನೆ  

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 25 : ಉನ್ನತ ಶಿಕ್ಷಣ ಜಾಗತಿಕ ಮಟ್ಟದಲ್ಲಿ ಬದಲಾವಣೆಯಾಗುತ್ತಿರುವುದರಿಂದ ತಂತ್ರಜ್ಞಾನದ ಬಗ್ಗೆ ಜ್ಞಾನ ಬೆಳೆಸಿಕೊಂಡರೆ

ಟೆನ್ನಿಸ್‍ಬಾಲ್ ಕ್ರಿಕೆಟ್ ಟೂರ್ನಿ : ಟ್ರೋಫಿ ಗೆದ್ದ ಚಿತ್ರದುರ್ಗ ವಕೀಲರ ತಂಡ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 25 : ಹರಿಹರದಲ್ಲಿ ನವೆಂಬರ್ 23 ಮತ್ತು 24 ರಂದು ನಡೆದ ಅಂತರ್ ಜಿಲ್ಲಾ

error: Content is protected !!