ಬಿಡದಿ: ಪಕ್ಷದಲ್ಲಿ ಬೆಳೆದು ಬಿಟ್ಟು ಹೊರಹೋಗಿ ತೆಗಳಿದರೆ ಸುಮ್ಮನಿರಲಾಗದು. ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಬಿಡದಿಯ ತೋಟದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೆಲ ಶಾಸಕರ ಬಹಿರಂಗ ಹೇಳಿಕೆಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಪಕ್ಷ ತೊರೆಯುವ ಬಗ್ಗೆ ಕೆಲವರು ಅನಗತ್ಯವಾಗಿ ಗೊಂದಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದರು.
ಅವರೇ ಸ್ವತಃ ಗೊಂದಲ ಸೃಷ್ಟಿಸಿಕೊಂಡು ಬಹಿರಂಗ ಹೇಳಿಕೆ ಕೊಡುವುದು ಯಾಕೆ ? ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚಿಸಬಹುದಾದ ವಿಚಾರಗಳನ್ನು ಹೊರಗೆ ಹೇಳುವುದು ಸರಿಯಲ್ಲ. ಏನೇ ಸಮಸ್ಯೆ, ಗೊಂದಲ ಇದ್ದರೂ ಬರಲಿ. ಚರ್ಚೆ ಮಾಡಲು ನಾನು ಸಿದ್ಧ ಇದ್ದೇನೆ. ಯಾರೂ ಪಕ್ಷದ ಸಂಘಟನೆಗೆ ಹೊಡೆತ ಬೀಳುವಂತೆ ನಡೆದುಕೊಳ್ಳಬಾರದು. ಯಾರೇ ಶಾಸಕರು ಬಂದರು ಮುಕ್ತವಾಗಿ ನಾನು ಯಾವಾಗಲೂ ಮಾತನಾಡುತ್ತೇನೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಸಿದ್ಧನಿದ್ದೇನೆ. ನನ್ನ ಮನೆ ಬಾಗಿಲು ಸದಾ ತೆರೆದಿರುತ್ತದೆ. ಆದರೆ, ಮೂರ್ನಾಲ್ಕು ಜನ ಪಕ್ಷ ತೊರೆಯುವ ಮಾತನ್ನಾಡಿದ್ದಾರೆ. ಅವರ ಕ್ಷೇತ್ರಗಳಲ್ಲಿ ಪರ್ಯಾಯ ಅಭ್ಯರ್ಥಿಗಳನ್ನು ಹುಡುಕಿದ್ದೇವೆ ಎಂದರು.