10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ? ; ಮಾಜಿ ಸಿಎಂ ಕುಮಾರಸ್ವಾಮಿ

suddionenews
1 Min Read

ಬೆಂಗಳೂರು: ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಇಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ್ ಕೂಡ ಭಾಗಿಯಾಗಿದ್ದು ಈಗ ವಿರೋಧ ಪಕಗಳಿಗೆ ಆಹಾರವಾಗಿದೆ. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿರುವುದು ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ?  ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ.ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ.

ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್ ಸುರ್ಜೆವಾಲಾ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು?

ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ,  ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ!! ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ! ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ!! ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *