in

ಅಕ್ಕಿ ಭಾಗ್ಯದ ಅಸಲಿಯತ್ತು ಏನು : ಕುಮಾರಸ್ವಾಮಿ ಟ್ವೀಟ್ ನಲ್ಲೇನಿದೆ..?

suddione whatsapp group join

ಬೆಂಗಳೂರು: ಬಡವರಿಗೆ ಅನುಕೂಲವಾಗಲಿ ಅಂತ ಕಾಂಗ್ರೆಸ್ ಸಿದ್ದರಾಮಯ್ಯ ಸರ್ಕಾರ ಸಾಕಷ್ಡು ಜನಪರ ಕೆಲಸಗಳನ್ನ ಮಾಡಿದ್ದಾರೆ. ಅದರಲ್ಲಿ ಅಕ್ಕಿ ಭಾಗ್ಯವೂ ಒಂದು. ಬಿಪಿಎಲ್ ಕಾರ್ಡುದಾರರಿಗೆ ತಲೆಗೆ 7 ಕೆಜಿ ಅಕ್ಕಿಯನ್ನ ನೀಡಲಾಗ್ತಾ ಇತ್ತು. ಆ ಬಳಿಕ ಈ ಅಕ್ಕಿಯ ಪ್ರಮಾಣವನ್ನ ಕಡಿಮೆ ಮಾಡಲಾಗಿತ್ತು. ಈ ಬಗ್ಗೆ ಸಿದ್ದರಾಮಯ್ಯ ಆರೋಪದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಬ್ಯಾಕ್ ಟು ಬ್ಯಾಕ್ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ʼಅಕ್ಕಿಭಾಗ್ಯದ ಅಸಲಿಯೆತ್ತುʼ ಏನು ಎಂಬುದನ್ನು ಈಗಾಗಲೇ ಸದನದಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದೇನೆ. ಅದಾದ ಮೇಲೂ ನಿಮ್ಮ ʼಸುಳ್ಳಿನ ಜಪʼ ಮುಂದುವರಿದಿದೆ. ಸತ್ಯ ಹೇಳಲು ಹಿಂಜರಿಕೆ-ಅಧೈರ್ಯ ಏಕೆ? ಸುಳ್ಳಿನ ಮೇಲಿರುವಷ್ಟು ನಿಷ್ಠೆ ಸತ್ಯದ ಮೇಲೆ ಯಾಕಿಲ್ಲ? ಐದು ಕೆಜಿ ಅಕ್ಕಿ ಅಸಲಿಯೆತ್ತಿನ ಬಗ್ಗೆ ಹೇಳಲು ಅಂಜಿಕೆ ಏಕೆ ಸಿದ್ದರಾಮಯ್ಯನವರೇ?.

ಸಮ್ಮಿಶ್ರ ಸರಕಾರದಲ್ಲಿ ನಾನು ಮುಖ್ಯಮಂತ್ರಿ ಆಗಿದ್ದೆ. ಅದಕ್ಕೆ ಮುನ್ನ ಬಜೆಟ್ ಮಂಡಿಸಿ ಚುನಾವಣೆಗೆ ಹೋದ ತಾವು ಎಷ್ಟು ಕೆಜಿ ಅಕ್ಕಿಗೆ ಹಣ ಇಟ್ಟಿದ್ದಿರಿ? 5 ಕೆಜಿಗೋ ಅಥವಾ 7 ಕೆಜಿಗೋ? ಸತ್ಯವನ್ನು ಕಕ್ಕಲು ಕಷ್ಷವೇಕೆ? ನಾಲಗೆ ತಡವರಿಸುತ್ತಿದೆಯಾ ಪ್ರತಿಪಕ್ಷ ನಾಯಕರೇ?.

ಸಮ್ಮಿಶ್ರ ಸರಕಾರದಲ್ಲಿ 5 ಕೆಜಿ ಅಕ್ಕಿ ನೀಡಲಾಯಿತು, ನಿಜ. 7 ಕೆಜಿ ಕೊಡಿ ಎಂದು ಬೊಬ್ಬೆ ಹೊಡೆದ ನೀವೇ ಹಣ ಇಟ್ಟಿದ್ದದ್ದು 5 ಕೆಜಿಗೆ ಮಾತ್ರ. ಹೊರಗೆ ಕುಮಾರಸ್ವಾಮಿ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದರು ಎಂದು ನಿರ್ಲಜ್ಜವಾಗಿ ಸುಳ್ಳು ಹೇಳುತ್ತಿದ್ದೀರಿ. ಉಳಿದ 2 ಕೆಜಿ ಅಕ್ಕಿಗೆ ಹಣ ಎಲ್ಲಿತ್ತು? ಪಾಪಪ್ರಜ್ಞೆ ಇಲ್ಲವಾ ನಿಮಗೆ?.

ಚುನಾವಣೆಯಲ್ಲಿ ಕೇವಲ ಮತ ಪಡೆಯುವ ದುರುದ್ದೇಶದಿಂದ ನೀವು ಜನರು ತಿನ್ನುವ ಅನ್ನದ ಜತೆಗೂ ರಾಜಕೀಯ ಮಾಡುತ್ತಿದ್ದರಿ. ಆದರೆ ಉಳಿದ 2 ಕೆಜಿ ಅಕ್ಕಿಗೆ ಹಣ ಹೊಂದಿಸಲು ಸಮ್ಮಿಶ್ರ ಸರಕಾರದಲ್ಲಿ ನಾವು ಪಟ್ಟ ಕಷ್ಟ ನಿಮಗೆ ಗೊತ್ತಿಲ್ಲವೇ?.

ಸದನದಲ್ಲಿ ಈ ವಿಷಯವನ್ನು ನಾನು ಪ್ರಸ್ತಾಪ ಮಾಡಿದಾಗ 5 ಕೆಜಿಗೆ ಹಣ ಮೀಸಲಿಟ್ಟು ‘ಅಕ್ಕಿಗಾಗಿ ಮಿಡಿದ ನಿಮ್ಮ ಆತ್ಮಸಾಕ್ಷಿ’ ಎಲ್ಲಿ ಹೋಗಿತ್ತು? ಸುಳ್ಳಿನ ಶೂರ ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ಸುಳ್ಳಿನ ʼಸಿದ್ದಕಲೆʼಗೆ ಕೊನೆ ಹಾಡಿ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಸ್ಟಾರ್ ಸಿನಿಮಾಗಳು ಮುಖಾಮುಖಿ : ಅಖಾಡಕ್ಕಿಳಿಯಲು ನಿರ್ಮಾಪಕರು ರೆಡಿ..!

ಯಾದಗಿರಿಯಲ್ಲಿ ಮತಾಂತರ ದಂಧೆ : ಏನಿವಾಗ ಎಂದ ಚರ್ಚ್ ಫಾದರ್..!