Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಕೀಯ ಬದುಕು ಕೊಟ್ಟ ‘ಸಿದ್ಧಸೂತ್ರಧಾರ’ನಿಗೆ ಜೆಡಿಎಸ್ ಮುಗಿಸುವ ಹಂಬಲ : ಕುಮಾರಸ್ವಾಮಿ ಆಕ್ರೋಶ

Facebook
Twitter
Telegram
WhatsApp

ಬೆಂಗಳೂರು: ಪ್ರಧಾನಿ ಮೋದಿ ಅವರನ್ನ ಮಾಜಿ ಪ್ರಧಾನಿ ದೇವೇಗೌಡ ಅವರು ಭೇಟಿಯಾಗಿದ್ದರು. ಇದನ್ನ ಸಿದ್ದರಾಮಯ್ಯ ಅವರು ರಾಜಕೀಯ ಭೇಟಿ ಎಂದಿದ್ದರು. ಇದಕ್ಕೆ ಈಗಾಗ್ಲೇ ದೇವೇಗೌಡ ಅವರು ಕೂಡ ತಿರುಗೇಟು ನೀಡಿದ್ದಾರೆ. ಈಗ ಸರಣಿ ಟ್ವೀಟ್ ಗಳ‌ ಮೂಲಕ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಸಂಸತ್ ಕಲಾಪಕ್ಕೆ ತೆರಳಿದ್ದ ಹೆಚ್.ಡಿ.ದೇವೇಗೌಡರು ಅಲ್ಲಿಯೇ ಇದ್ದ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಆ ಭೇಟಿ ರಾಜಕೀಯ, ಸಂಕುಚಿತತೆಯ ಎಲ್ಲೆ ಮೀರಿದ್ದು ಎನ್ನುವುದನ್ನು ಆ ಇಬ್ಬರು ನಾಯಕರ ಭೇಟಿಯ ಚಿತ್ರಗಳೇ ಹೇಳುತ್ತವೆ.

ಅಸೂಯೆ, ದ್ವೇಷ, ಅಸಹನೆ, ಸರ್ವಾಧಿಕಾರಿ ಮನೋಭಾವದ ʼಸಿದ್ದಕಲೆʼಯ ನಿಪುಣನಿಗೆ ರಾಜಕೀಯದಲ್ಲಿ ವಿರಳಾತಿ ವಿರಳವಾಗಿ ಕಾಣುವ ಇಂಥ ಭೇಟಿಗಳನ್ನು ಅರಗಿಸಿಕೊಳ್ಳುವುದು ಹೇಗೆ ತಾನೇ ಸಾಧ್ಯ?.

ʼರಾಜಕೀಯ ರಕ್ಕಸತನʼಕ್ಕೆ ಅವರು ರಾಜಾಧಿರಾಜ. ʼರಾಜಕೀಯ ಆಶ್ರಯʼ ನೀಡಿದ ಕಾಂಗ್ರೆಸ್ ಪಕ್ಷವನ್ನೇ ಹೆಬ್ಬಾವಿನಂತೆ ನುಂಗಲು ಹೊರಟ ʼಸಿದ್ದಸೂತ್ರಧಾರʼನಿಗೆ ರಾಜಕೀಯ ಬದುಕು ಕೊಟ್ಟು ಬೆಳೆಸಿದ ಜೆಡಿಎಸ್ ಪಕ್ಷವನ್ನು ಮುಳುಗಿಸಿಬಿಡುವ ಹಗಲುಕನಸು ಬೇರೆ ಇದೆ.

ದೇವೇಗೌಡರು ಅವಕಾಶವಾದಿ ರಾಜಕಾರಣಿ ಎನ್ನುವ ಆ ನಾಲಗೆ, ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎನ್ನುವ ಆ ನಾಲಗೆಯ ಮೇಲೆ ʼಪಕ್ಷನಿಷ್ಠೆʼ ಎನ್ನುವ ಪದ ಎಂದಾದರೂ ಬಂದಿದೆಯಾ? ಅದಕ್ಕೆ ಆ ಪದ ʼಪರಮ ಅಪಥ್ಯʼ ಎನ್ನುವುದು ಇಡೀ ರಾಜ್ಯದ ಜನರಿಗೆ ಗೊತ್ತು.

ನನಗಿಲ್ಲದಿದ್ದರೆ ಯಾರಿಗೂ ಬೇಡ ಎನ್ನುವ ಸ್ವಾರ್ಥ ಮನೋಭಾವದಿಂದ ಸ್ವಪಕ್ಷವೂ ಇದ್ದ ಮೈತ್ರಿ ಸರಕಾರವನ್ನೇ ʼಸ್ವಾಹಾʼ ಮಾಡಿ ಆಪರೇಷನ್ ಕಮಲದ ಕೆಸರಿನಲ್ಲಿ ವಿಕೃತವಾಗಿ ಹೊರಳಾಡಿದವರು ಯಾರು ಎನ್ನುವುದು ಅವರ ಸ್ವಪಕ್ಷೀಯರಿಗೇ ಚೆನ್ನಾಗಿ ಗೊತ್ತು.

ನಾಯಕರಿಗೆ ಗತಿ ಇಲ್ಲ, ಅಭ್ಯರ್ಥಿಗಳಿಗಂತೂ ದಟ್ಟ ದಾರಿದ್ರ್ಯ. ಇನ್ನು, ಪಕ್ಷದ ಬಗ್ಗೆ ಹೇಳುವುದೇ ಬೇಡ. ಅಧ್ಯಕ್ಷರಿಗೊಂದು ಕಾಂಗ್ರೆಸ್, ಪ್ರತಿಪಕ್ಷ ನಾಯಕರಿಗೊಂದು ಕಾಂಗ್ರೆಸ್. ಅಷ್ಟೇ ಅಲ್ಲ; ಜಿಲ್ಲೆಗಳಲ್ಲಿ ಎರಡೆರಡು ಕಾಂಗ್ರೆಸ್ʼಗಳು!! ʼಸಿದ್ದಸೂತ್ರಧಾರʼನಿಗೆ ಇದೆಲ್ಲ ಗೊತ್ತಿಲ್ಲವೇ?.

ಬಾಯಲ್ಲಿ ಜಾತ್ಯತೀತೆಯ ಜಪ ಮಾಡುತ್ತಲೇ ʼಸಂದೇಶ ಸನ್ನಿಧಿʼಯಲ್ಲಿ ʼಸಿದ್ಧಸೂತ್ರʼ ಹೆಣೆದ ʼರಕ್ಕಸ ರಾಜಕಾರಣʼಕ್ಕೆ ಕೊನೆಗಾಲ ಬಂದಿದೆ. ಆ ದಿನವೂ ಹತ್ತಿರದಲ್ಲೇ ಇದೆ ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!