ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅನಿರೀಕ್ಷಿತ ಭೇಟಿ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿದೆ. ಹಾಗೂ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.
ನಿನ್ನೆ ಬೆಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದ ವೇಳೆ ಇಬ್ಬರು ನಾಯಕರು ಮುಖಾಮುಖಿಯಾಗಿ ಸುಮಾರು 20 ನಿಮಿಷಗಳ ಕಾಲ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ.ಈ ಮಾತುಕತೆ ಯಾವ ವಿಷಯದ ಬಗ್ಗೆ ಎಂಬ ಚರ್ಚೆ ರಾಜಕೀಯದಲ್ಲಿ ಗೊಂದಲಮೂಡಿಸಿದೆ.
ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಇಬ್ಬರೂ ಮಾತನಾಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಈ ಚರ್ಚೆಯ ಹಿಂದೆ ಯಾವುದೊ ರಾಜಕೀಯ ವಿಷಯಗಳಿವೆಯೇ? ಅಥವಾ ಕೇವಲ ಕುಶಲ ಮಾತುಕತೆಯೇ? ಎಂಬುದರ ಬಗ್ಗೆ ಮಾಹಿತಿ ದೊರೆತಿಲ್ಲ, ಇಬ್ಬರು ನಾಯಕರ ಮಧ್ಯೆ ನಡೆದ ಈ ಸಂಭಾಷಣೆ ಮುಂದಿನ ದಿನಗಳಲ್ಲಿ ಹೊಸ ರಾಜಕೀಯ ಬೆಳವಣಿಗೆ ಆಗಲಿದೆಯೇ ? ಎಂಬ ಗೊಂದಲ ರಾಜಕೀಯದಲ್ಲಿ ಉಂಟಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











