Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಚ್.ಡಿ ರೇವಣ್ಣ ಜೈಲಿನಿಂದ ಬಿಡುಗಡೆ : ಲಾಠಿಚಾರ್ಜ್ ಮಾಡಿದ ಪೊಲೀಸರು..!

Facebook
Twitter
Telegram
WhatsApp

 

 

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋದಲ್ಲಿದ್ದ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ್ದ ಕೇಸ್ ಗೆ ಸಂಬಂಧಿಸಿದಂತೆ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಕಳೆದ ಎರಡು ವಾರದಿಂದ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದರು. ಜಾಮೀನಿಗೆ ಅರ್ಜಿ ಸಲ್ಲಿಸಿದಾಗ ಕೋರ್ಟ್ ನಿರಾಕರಣೆ ಮಾಡಿತ್ತು. ನಿನ್ನೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ.

ಕೋರ್ಟ್ ಜಾಮೀನು ನೀಡಿದರು, ಜೈಲಿನ ಪ್ರಕ್ರಿಯೆ ಮುಗಿಸಿ, ಇಂದು ರೇವಣ್ಣನಿಗೆ ಬಿಡುಗಡೆ ಭಾಗ್ಯಾ ಸಿಕ್ಕಿದೆ. ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗೆ ನಡೆದಿದ್ದಾರೆ. ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ ಎಂದು ತಿಳಿದ ಕೂಡಲೇ ಹೊಳೇನರಸೀಪುರದಲ್ಲಿ ಸಂಭ್ರಮಾಚರಣೆ ಕೂಡ ಮಾಡಲಾಗಿದೆ. ಪಟಾಕಿ ಸಿಡಿಸಿ, ರೇವಣ್ಣ ಅವರನ್ನು ಸ್ವಾಗತಿಸಲು ಕಾರ್ಯಕರ್ತರು ಸಜ್ಜಾಗಿದ್ದಾರೆ.

ಇನ್ನು ಪರಪ್ಪನ ಅಗ್ರಹಾರದ ಮುಂದೆಯೂ ಕಾರ್ಯಕರ್ತರು ಜಮಾಯಿಸಿದ್ದರು‌. ರೇವಣ್ಣ ಬಿಡುಗಡೆಯಾಗುತ್ತಿದ್ದಂತೆ ಘೋಷಣೆ ಕೂಗಿದರು. ಜನಜಂಗುಳಿ ಜಾಸ್ತಿಯಾದ ಪರಿಣಾಮ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಕಾರ್ಯಕರ್ತರನ್ನು ಸರಿಸಿ, ರೇವಣ್ಣ ಅವರನ್ನು ಕಳುಹಿಸಿದರು.

ಇನ್ನು ಪ್ರಜ್ವಲ್ ರೇವಣ್ಣ ಮಾತ್ರ ಸಾಕಷ್ಟು ಕೇಸ್ ಗಳು ಬಿದ್ದರು ವಿದೇಶದಿಂದ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ. ರೇವಣ್ಣ ಜೈಲಿಂದ ಬಿಡುಗಡೆಯಾಗಿದ್ದಾರೆ. ಇನ್ನಾದರೂ ಪ್ರಜ್ವಲ್ ಬರುತ್ತಾರಾ ನೋಡಬೇಕಿದೆ. ಎಸ್ಐಟಿ ತಂಡ ಕೂಡ ರೇವಣ್ಣನ ವಿಚಾರಣೆಗಾಗಿ ಕಾಯುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಉದ್ಯೋಗ ವಾರ್ತೆ | ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಹುದ್ದೆಗಳ ನೇಮಕ

ಸುದ್ದಿಒನ್, ಬೆಂಗಳೂರು, ಮೇ. 24 :ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಒಟ್ಟು 902 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್ನಲ್ಲಿ ನೇಮಕ ಪ್ರಕ್ರಿಯೆ

ಉದ್ಯೋಗ ವಾರ್ತೆ | ಅತಿಥಿ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಅರ್ಜಿ

  ಚಿತ್ರದುರ್ಗ. ಮೇ.24:  ಚಿತ್ರದುರ್ಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು, ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಐಪಿಎಲ್ ನಿಂದ ಹೊರಬಿದ್ದ ಮೇಲೆ ಅಭಿಮಾನಿಗಳಿಗಾಗಿ ಪೋಸ್ಟ್ ಹಾಕಿದ ವಿರಾಟ್ ಕೊಹ್ಲಿ

  ಈ ಬಾರಿಯ ಐಪಿಎಲ್ ನಲ್ಲಿ ಆರ್ಸಿಬಿ ಟೀಂ ಆಡಿದ್ದು ನೋಡಿದ್ರೆ ಖಂಡಿತ ಕಪ್ ಗೆದ್ದು ತಂದೇ ತರುತ್ತಾರೆ ಎಂಬ ವಿಶ್ವಾಸ ಎಲ್ಲರಿಗೂ ಮೂಡಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಸೋತು,

error: Content is protected !!