ಹಾಸನ : ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರುತ್ತಿರುವುದು ರಾಜ್ಯಾದ್ಯಂತ ಹರಡಿದೆ. ಉಡುಪಿಯಲ್ಲಿ ಶುರುವಾದ ಹಿಂದುಯೇತರ ವ್ಯಾಪಾರಿಗಳಿಗೆ ನಿರ್ಬಂಧ ವಿಚಾರ, ಇದೀಗ ಯಾವ ಜಿಲ್ಲೆಯಲ್ಲಿ ಜಾತ್ರೆ ನಡೆಯುತ್ತದೆಯೋ ಆಯಾ ಜಿಲ್ಲೆಯಲ್ಲಿ ನಿರ್ಬಂಧ ವಿಧಿಸಲಾಗುತ್ತಿದೆ.
ಈ ಸಂಬಂಧ ಮಾಜಿ ಸಚಿವ ಹೆಚ್ ಡಿ ರೇವಣ್ಣ ಆಕ್ರೋಶಗೊಂಡಿದ್ದಾರೆ. ಈ ರೀತಿ ಮಾಡುವುದು ಸರಿಯಲ್ಲ ಎಂದಿದ್ದಾರೆ. ಹಿಂದೂ, ಮುಸ್ಲಿಂ ಅಂತ ತಡೆದರೆ ಬಲಿ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹಾಸನದಲ್ಲಿ ಈ ಸಂಬಂಧ ಮಾತನಾಡಿದ ಅವರು, ಹಿಂದೂ, ಮುಸ್ಲಿಂ ಅಂತ ತಡೆದರೆ ಬಲಿ ಹಾಕಬೇಕಾಗುತ್ತದೆ. ಯಾವುದೇ ಪಾರ್ಟಿ ಆಗಲಿ ಅವರನ್ನ ಬಲಿ ಹಾಕಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಕಲ್ಮಶ ಆಗದಂತೆ ಜಿಲ್ಲಾಡಳಿತ ನೋಡಿಕೊಳ್ಳಲಿ ಎಂದಿದ್ದಾರೆ.
ಹಿಂದುಗಳು ಬೇರೆಯಲ್ಲ, ಮುಸ್ಲಿಂರು ಬೇರೆಯಲ್ಲ. ನಾಲ್ವರು ಕೇಸರಿ ಶಾಲು ಹಾಕಿಕೊಂಡು ಬಂದರೆ ಕೇರ್ ಮಾಡಲ್ಲ. ಎಲ್ಲಾ ಸಮಾಜದವರು ಒಟ್ಟಾಗಿ ಬಾಳಬೇಕು ಎಂದು ಸಲಹೆ ನೀಡಿದ್ದಾರೆ.