ಬದುಕಿಗೊಂದು ಗ್ಯಾರಂಟಿ ಕೊಡಿ ಎಂದು ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ..!

1 Min Read

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಾನೂ ನೀಡಿದ್ದ ಭರವಸೆಗಳ ಗ್ಯಾರಂಟಿಗಳನ್ನು ನೀಡಿದೆ. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಅವರು ಬದುಕಿಗೆ ಗ್ಯಾರಂಟಿ ನೀಡಿ ಅಂತಿದ್ದಾರೆ.

ರಾಜ್ಯ @INCKarnataka ಸರಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ.

ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಇನ್ನು, ಸರಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ.

ಈ ಬಂದ್ ನಿಂದ ಸರಕಾರಿ ಸಾರಿಗೆಗೆ ಪರ್ಯಾಯವಾಗಿದ್ದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿದೆ.

 

ಸರಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್ ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರಕಾರ ಮರೆಯಬಾರದು.

ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕು. ನುಡಿದಂತೆಯೇ ನಡೆದು, ‘ಗ್ಯಾರಂಟಿ ಬಾಧಿತರ’ ಬದುಕಿಗೆ ಪರಿಹಾರ ಒದಗಿಸಬೇಕು ಎನ್ನುವುದು ನನ್ನ ಆಗ್ರಹ.ತಕ್ಷಣವೇ ಬಂದ್ ನಿರತರನ್ನು ಮುಖ್ಯಮಂತ್ರಿಗಳದ ಶ್ರೀ @siddaramaiah ಅವರು, ಸಾರಿಗೆ ಸಚಿವ ಶ್ರೀ @RLR_BTM ಅವರು ಕರೆದು ಮಾತನಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *