ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ತಿಂಗಳಿಗೇನೆ ಉರುಳಿ ಹೋಯ್ತು. ಅದಕ್ಕೆ ಹಲವರು ಕಾರಣೀಭೂತರಾಗಿದ್ದರು. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸ್ಯಾಂಟ್ರೋ ರವಿ ಬಗ್ಗೆ ಆರೋಪವೊಂದನ್ನು ಮಾಡಿದ್ದಾರೆ. ಸಮ್ಮಿಶ್ರ ಸರ್ಕಾರ ಉರುಳಿಸುವ ವೇಳೆ ಯಾರು..? ಎಲ್ಲಿಗೆ ಕರೆದುಕೊಂಡು ಹೋಗಿದ್ದರು..? ಅಂತ ತನಿಖೆ ನಡೆಸಬೇಕು ಎಂದಿದ್ದಾರೆ.
ದಲಿತ ಮಹಿಳೆಯೊಬ್ಬರನ್ನು ಮದುವೆಯಾದ ಮೇಲೆ ವಂಚಿಸಿ, ಪರ ಪುರುಷರ ಜೊತೆಗೆ ಮಲಗುವಂತೆ ಒತ್ತಾಯಿಸಿದ್ದಕ್ಕಾಗಿ ಮೈಸೂರು ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೋ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಸ್ಯಾಂಟ್ರೋ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸ್ಯಾಂಟ್ರೋ ರವಿಗೆ ಯಾವ್ಯಾವ ಮಂತ್ರಿಗಳಿಗೆ ಏನೇನು ಸಂಬಂಧವಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂಬುದನ್ನು ಒತ್ತಾಯಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಆತನ ಬಗ್ಗೆ ಹೇಳಬೇಕು. ಕುಮಾರಕೃಪ ಗೆಸ್ಟ್ ಹೌಸ್ ನಲ್ಲಿ ಆತನ ವ್ಯವಹಾರ, ಇವನಿಗೆ ರೂಂ ಕೊಟ್ಟವರು ಯಾರು..? ಯಾರ ರೆಫರೆನ್ಸ್ ಮೇಲೆ ರೂಂ ಕೊಟ್ಟರು..? ಸಮ್ಮಿಶ್ರ ಸರ್ಕಾರ ಉರುಳಿಸುವ ವೇಳೆ ಆತನನ್ನು ಯಾರು, ಎಲ್ಲಿಗೆ ಕರೆದುಕೊಂಡು ಹೋಗಿದ್ದರು..? ಅದನ್ನು ನಾವೂ ಹೇಳುವುದಕ್ಕೆ ಹೋಗುವುದಿಲ್ಲ. ಮೈತ್ರಿ ಸರ್ಕಾರವನ್ನು ತೆಗೆಯಲು ಇವನನ್ನೇ ಕರೆದುಕೊಂಡು ಹೋಗಿದ್ದರು ಎಂದು ಆರೋಪಿಸಿದ್ದರು.