ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ನ ಮಾಲೀಕ ಸಿಜೆ ರಾಯ್ ಗನ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಇದೀಗ ಅವರಿಗೆ ಡೆತ್ ನೋಟ್ ಸಿಕ್ಕಿದೆ. ಆ ಡೆತ್ ನೋಟ್ ನಲ್ಲಿ ಹಲವು ವಿಚಾರಗಳನ್ನು ಉಲ್ಲೇಖ ಮಾಡಿದ್ದಾರೆ. ಮೊದಲಿಗೆ ಅವರ ಮನೆಯವರಿಗೆ ಕ್ಷಮೆಯನ್ನು ಕೇಳಿದ್ದಾರೆ. ನಾನು ಎಕ್ಸ್ ಟ್ರೀಮ್ ಸ್ಟೆಪ್ ತೆಗೆದುಕೊಳ್ಳುತ್ತಿದ್ದೇನೆ. ಕ್ಷಮೆ ಇರಲಿ ಎಂದು ಬರೆದಿದ್ದಾರೆ.
ಜೊತೆಗೆ ರಾಯ್ ಅವರು ಯಾರಿಗೆಲ್ಲಾ ಹಣವನ್ನು ಸಾಲದ ರೂಪದಲ್ಲಿ ಕೊಟ್ಟಿದ್ದಾರೆ. ಯಾರು, ಎಷ್ಟು ಹಣವನ್ನು ನೀಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕಂಪ್ಲೀಟ್ ಮಾಹಿತಿಯನ್ನು ಡೆತ್‌ನೋಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ. ತನ್ನ ನಿಧನದ ನಂತರದಲ್ಲಿ ಯಾರೂ ತಮ್ಮ ಸ್ಥಾನದಲ್ಲಿ ಕೂರಬೇಕು ಎಂಬ ಮಾಹಿತಿಯನ್ನು ನೀಡಿದ್ದಾರೆ. ಕಾನ್ಫಿಡೆಂಟ್ ಗ್ರೂಪ್ ನಲ್ಲಿ ಯಾರೆಲ್ಲಾ ದುಡಿದಿದ್ದಾರೆ, ಅವರ್ಯಾರಿಗೂ ಮೋಸ ಮಾಡಬೇಡಿ. ಅವರೆಲ್ಲಾ ನಂಬಿಕಸ್ಥರು ಎಂಬ ಮಾತನ್ನು ತಿಳಿಸಿದ್ದಾರೆ.
ರಾಯ್ ಅವರು ತಮ್ಮ ಡೆತ್ ನೋಟ್ ನಲ್ಲಿ ಬರೆದ ಅಂಶಗಳ ಆಧಾರದ ಮೇಲೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರಾಯ್ ಅವರ ಕಂಪ್ಲೀಟ್ ವ್ಯವಹಾರ ಎಲ್ಲವೂ ಅವರ ಪತ್ನಿಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ರಾಯ್ ಅವರ ಅಂತ್ಯಕ್ರಿಯೆ ಬಳಿಕ ಅವರ ಪತ್ನಿ ಬಳಿ ಎಲ್ಲಾ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಮಗನನ್ನು ಕಳೆದುಕೊಂಡ ಅವರ ತಾಯಿ ಅಂತು ಊಟ – ತಿಂಡಿ ಮಾಡದೆ ನಿತ್ರಾಣರಾಗಿದ್ದರು. ಹೆಂಡತಿ, ಮಕ್ಕಳಂತು ದಿಕ್ಕೆ ತೋಚದಂತೆ ಆಗಿದ್ದಾರೆ. ಇದರ ನಡುವೆ ತನಿಖೆಯೂ ನಡೆಯುತ್ತಿದ್ದು, ಅದಕ್ಕೂ ಸಹಕರಿಸಬೇಕಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್