Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅವರಂತೆ ಕುಟುಂಬಗಳನ್ನು ಬೀದಿಗೆ ತಳ್ಳಿ ದುಡ್ಡು ಮಾಡಿದವನಲ್ಲ : ಹೆಚ್ ಡಿ ಕುಮಾರಸ್ವಾಮಿ

---Advertisement---

ಕೋಲಾರ: ಡಿಕೆ ಬ್ರದರ್ಸ ಮೇಲೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತೆ ಗುಡುಗಿದ್ದಾರೆ. ‌ಕೋಲಾರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು, ಡಿಕೆ ಬ್ರದರ್ಸ್ ವಿರುದ್ಧ ಅಕ್ರಮದ ಆರೋಪವನ್ನು ಮಾಡಿದ್ದಾರೆ. ಲೋಕಸಭಾ ಚುನಾವಣೆಯ ದಿನಾಂಕ ಇನ್ನು ಘೋಷಣೆಯೇ ಆಗಿಲ್ಲ. ಆದರೆ ಆಗಲೇ ಗಿಫ್ಟ್ ಗಳನ್ನು ಹಂಚಲು ಶುರು ಮಾಡಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಅಸಹನೆ ಶುರುವಾಗಿದೆ. ಅಭಿವೃದ್ಧಿ ಮಾಡಿದ್ದರೆ ಗಿಫ್ಟ್ ಗಳನ್ನು ಯಾಕೆ ಹಂಚಬೇಕಿತ್ತು. ಚೈನಾದಿಂದ ಕುಕ್ಕರ್, ಮಿಕ್ಸಿ ತರಿಸಿ, ಫೋಟೋ ಹಾಕಿ ಹಂಚಲು ಶುರು ಮಾಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದೆ ವೇಳೆ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ದೊಡ್ಡ ಆಲಹಳ್ಳಿಯಲ್ಲಿ ಜನರಿಗೆ ಯಾವ ರೀಲ್ ತೋರಿಸಿ‌ ಬಂದಿದ್ದೀರಾ ಅನ್ನೋದು ಗೊತ್ತು. ಜನರ ಜೀವನ ಸರಿ ಮಾಡುವಂತ ರೀಲ್ ಗಳನ್ನು ತೋರಿಸಿಕೊಂಡು ನಾನು ಬಂದಿದ್ದೀನಿ. ಕಲ್ಲು ಹೊಡೆದು‌ ಕುಟುಂಬಗಳಿಗೆ ಬೆದರಿಕೆ ಹಾಕಿದ್ದಾರೆ. ಲೂಟಿ ಮಾಡಿ ಬೆಳೆದಿದ್ದೀರಿ.

 

ನಾನು ಓದುವಾಗಲೇ ಮೂರು ಲಾರಿ ಹೊಂದಿದ್ದೆ. ಅವರಂತೆ ಸಾಕಷ್ಟು ಕುಟುಂಬಗಳನ್ನು ಬೀದಿಗೆ ತಳ್ಳಿ ಅದರಲ್ಲಿ ಹಣ ಮಾಡಿದವನಲ್ಲ. ಕಲ್ಲು ಹೊಡೆದು ನೂರಾರು ಕುಟುಂಬಕ್ಕೆ ಬೆದರಿಕೆ ಹಾಕಿದವರು ಯಾರು..? ನನ್ನ ಜೀವನವೇ ಬೇರೆ ಅವರ ಜೀವನವೆ ಬೇರೆ ಎಂದು ಹೇಳುವ ಮೂಲಕ ಡಿಕೆ ಶಿವಕುಮಾರ್ ಅವರ ಕಲ್ಲು ಒಡೆಯುತ್ತಿವೋ.. ಕಸ ಎತ್ತುತ್ತೀವೋ ಅನ್ನೋ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕೋಲಾರದಿಂದ ತಮ್ಮದೇ ಅಭ್ಯರ್ಥಿ ನಿಲ್ಲಿಸುವ ಪ್ಲ್ಯಾನ್ ಇದ್ದು, ಸಂಚಾರ ಶುರು ಮಾಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...