ತುರುವನೂರು ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ನಿಧನ

1 Min Read

ಚಿತ್ರದುರ್ಗ, (ಜು.27) : ತಾಲ್ಲೂಕಿನ ತುರುವನೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಾಂತೇಶ್ (48) ಇಂದು ಸಂಜೆ ನಿಧನರಾದರು.

ಜುಲೈ 16 ರಂದು ರಾಷ್ಟ್ರೀಯ ಹೆದ್ದಾರಿ 50(13) ಮಲ್ಲಾಪುರ ಬಳಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಜೆ.ಎನ್ ಕೋಟೆ ವಾಸಿಯಾದ ಇವರಿಗೆ ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಕುಟುಂಬವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ಗುರುವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸುವೆ.

ಮಹಾಂತೇಶ್ ಅವರ ಅಕಾಲಿಕ ನಿಧನಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರುಶುರಾಮ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *