Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಲೆಯಲ್ಲೇ ವಿಷ ಸೇವಿಸಿದ್ದ ಪ್ರಭಾರ ಮುಖ್ಯ ಶಿಕ್ಷಕ ಸಾವು: ಸಹ ಶಿಕ್ಷಕರು-ಅಡುಗೆ ಸಿಬ್ಬಂದಿ ನಡುವಿನ ವಿವಾದವೇ ಕಾರಣ?

---Advertisement---

ದಾವಣಗೆರೆ : ಸಹ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ನಡುವಿನ ಭಿನ್ನಾಭಿಪ್ರಾಯಗಳಿಂದ ಮಾನಸಿಕವಾಗಿ ನೊಂದಿದ್ದ ಪ್ರಭಾರ ಮುಖ್ಯ ಶಿಕ್ಷಕ ಜಯಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಾಲಾ ಸಮಯದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರು ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಶಾಲೆಯಲ್ಲಿ ಸಹ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿ ನಡುವೆ ಉಂಟಾಗಿದ್ದ ವಿವಾದದ ಹಿನ್ನೆಲೆಯಲ್ಲಿ ಜಯಪ್ಪ ಅವರು ತೀವ್ರ ಒತ್ತಡದಲ್ಲಿದ್ದರು ಎನ್ನಲಾಗಿದೆ.

ಸಮಸ್ಯೆ ಪರಿಹರಿಸುವ ಉದ್ದೇಶದಿಂದ ಸೋಮವಾರ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಗ್ರಾಮದ ಮುಖಂಡರ ನೇತೃತ್ವದಲ್ಲಿ ರಾಜಿ ಸಂಧಾನ ಸಭೆ ನಡೆಸಲಾಗಿತ್ತು. ಆದರೆ ಸಭೆಯಲ್ಲಿ ಯಾವುದೇ ಸ್ಪಷ್ಟ ಪರಿಹಾರ ಕಂಡುಬಂದಿರಲಿಲ್ಲ.ಇದಾದ ಬಳಿಕ ಮಂಗಳವಾರ ಬಿಆರ್‌ಸಿ ಅಧಿಕಾರಿಗಳ ನೇತೃತ್ವದಲ್ಲಿ ಮತ್ತೊಂದು ಸಭೆ ಆಯೋಜಿಸಲಾಗಿತ್ತು. ಸಭೆ ನಡೆಯುತ್ತಿದ್ದ ವೇಳೆ ಜಯಪ್ಪ ಅವರು ಶೌಚಾಲಯಕ್ಕೆ ತೆರಳಿದ್ದು, ಅಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ತಿಳಿದ ಕೂಡಲೇ ಸ್ಥಳೀಯರು ಮತ್ತು ಶಾಲಾ ಸಿಬ್ಬಂದಿ ಅವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.
ಮೃತ ಜಯಪ್ಪ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now