Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

---Advertisement---

ಸುದ್ದಿಒನ್, ಚಿತ್ರದುರ್ಗ. ಮಾರ್ಚ್ 27 :  ಚಿತ್ರದುರ್ಗ ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿಯ ಜ್ಞಾನಗಂಗೋತ್ರಿ ಕ್ಯಾಂಪಸ್‍ನಲ್ಲಿ ಚಿತ್ರದುರ್ಗ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಪ್ರಥಮ ಹಾಗೂ ದ್ವಿತೀಯ ಹಂತದ ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಎರಡು ದಿನಗಳ ಸಮಗ್ರ ಆರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ಜರುಗಿತು.

 

ಚಿತ್ರದುರ್ಗ ವೈದ್ಯಕೀಯ ಕಾಲೇಜು ಡೀನ್ ಹಾಗೂ ನಿರ್ದೇಶಕ ಡಾ. ಬಿ.ವೈ.ಯುವರಾಜ್ ಶಿಬಿರಕ್ಕೆ ಚಾಲನೆ ನೀಡಿ, “ವಿದ್ಯಾರ್ಥಿಗಳ ಆರೋಗ್ಯದ ಕಾಳಜಿ ಸಂಸ್ಥೆಯ ಪ್ರಮುಖ ಜವಾಬ್ದಾರಿಯಾಗಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗದ ಮಾರ್ಗಸೂಚಿಗಳಂತೆ ಈ ಶಿಬಿರ ನಡೆಸಲಾಗುತ್ತಿದ್ದು, ಇದು ಭವಿಷ್ಯದ ವೈದ್ಯರ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಪೂರಕವಾಗಿದೆ ಎಂದರು.

 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ. ರೇಣುಪ್ರಸಾದ್ ಮಾತನಾಡಿ, ಯುವಜನರಲ್ಲಿ ಜೀವನಶೈಲಿ ಸಂಬಂಧಿತ ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಇಂತಹ ಶಿಬಿರಗಳು ಸಹಕಾರಿ. ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು.

 

ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮಾತನಾಡಿ, ಶೈಕ್ಷಣಿಕ ಒತ್ತಡದ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಯ್ದುಕೊಳ್ಳುವುದು ಅತ್ಯಗತ್ಯ ಎಂದರು.

 

ಶಿಬಿರದಲ್ಲಿ ಸುಮಾರು 300 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮೂರು ಹಂತಗಳಲ್ಲಿ ತಪಾಸಣೆ ನಡೆಸಲಾಗಿದ್ದು, ರಕ್ತ ಪರೀಕ್ಷೆ, ಸಕ್ಕರೆ ಮಟ್ಟ, ಎಚ್‍ಬಿಎ1ಸಿ, ಯಕೃತ್ ಮತ್ತು ಮೂತ್ರಪಿಂಡ ಕಾರ್ಯ ಪರೀಕ್ಷೆ ಸೇರಿದಂತೆ ಸಮಗ್ರ ತಪಾಸಣೆ ಮಾಡಲಾಯಿತು. ಜನರಲ್ ಮೆಡಿಸಿನ್, ನೇತ್ರಶಾಸ್ತ್ರ ಇಎನ್‍ಟಿ, ಚರ್ಮರೋಗ ಹಾಗೂ ಸ್ತ್ರೀರೋಗ ವಿಭಾಗದ ತಜ್ಞರು ವಿದ್ಯಾರ್ಥಿಗಳಿಗೆ ವೈದ್ಯಕೀಯ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥೆ ಡಾ.ಎಲ್.ಎಚ್.ಅಶ್ವಿನಿ ಸೇರಿದಂತೆ ಅಕಾಡೆಮಿಕ್ ರಿಜಿಸ್ಟ್ರಾರ್, ರಿಸರ್ಚ್ ರಿಜಿಸ್ಟ್ರಾರ್, ಹಣಕಾಸು ಸಲಹೆಗಾರರು ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...