ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಆಧುನಿಕ ಜೀವನ ಶೈಲಿ ಹಾಗೂ ಒತ್ತಡದ ನಡುವೆ ಎಲ್ಲರೂ ಬದುಕುತ್ತಿರುವುದರಿಂದ ಒಂದಲ್ಲ ಒಂದು ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ. ಅದಕ್ಕಾಗಿ ಇಂತಹ ಉಚಿತ ಆರೋಗ್ಯ ಶಿಬಿರಗಳ ಸದುಪಯೋಗ ಪಡೆದುಕೊಂಡು ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು ಎಂದು ಮಾರುತಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಎಲ್.ಬಿ.ರಾಜಪ್ಪ ಕೆಂಗುಂಟೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಮಾರುತಿ ನಿವೃತ್ತ ನೌಕರರ ಸಂಘ ಹಾಗೂ ಶಿವಮೊಗ್ಗದ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಹಯೋಗದೊಂದಿಗೆ ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆಯಲ್ಲಿರುವ ಶಿವಾಂಜನೇಯ ರಂಗ ಮಂಟಪದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಬದಲಾದ ಆಹಾರ ಪದ್ದತಿಯಿಂದ ರಕ್ತದೊತ್ತಡ, ಮಧುಮೇಹ, ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಚಿಕ್ಕ ಚಿಕ್ಕ ಮಕ್ಕಳು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪುತ್ತಿರುವುದನ್ನು ನೋಡಿದರೆ ಆತಂಕವಾಗುತ್ತದೆ. ಹಳ್ಳಿಗಾಡಿನ ಜನ ದೊಡ್ಡ ದೊಡ್ಡ ನಗರಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಕಷ್ಟವಾಗುತ್ತದೆನ್ನುವುದನ್ನು ಗಮನದಲ್ಲಿಟ್ಟುಕೊಂಡು ಕೆಂಗುಂಟೆ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಹಮ್ಮಿಕೊಂಡಿದ್ದರಿಂದ ಸುತ್ತಮುತ್ತಲಿನ ಹಳ್ಳಿ ಜನರಿಗೆ ಪ್ರಯೋಜನವಾಗಿದೆ ಎಂದು ಹೇಳಿದರು.
ರೋಟರಿ ಕ್ಲಬ್ ಹೊಳಲ್ಕೆರೆ ಅಧ್ಯಕ್ಷ ನಟರಾಜ್ ಬಿ, ಕಾರ್ಯದರ್ಶಿ ರೊ.ಹೆಚ್.ಸಿ.ಶಿವಕುಮಾರ್, ನಿಕಟ ಪೂರ್ವ ಅಧ್ಯಕ್ಷ ರೊ.ಸುದರ್ಶನ್‍ಕುಮಾರ್ ಹೆಚ್.ಪಿ.
ರೊ.ಪ್ರಕಾಶ್ ಬಿ, ಮಾರುತಿ ನಿವೃತ್ತ ನೌಕರರ ಸಂಘದ ಗೌರವಾಧ್ಯಕ್ಷ ಎನ್.ಸಿ.ಎನ್.ರಾಜು, ಕಾರ್ಯದರ್ಶಿ ಡಾ.ರವಿ ಎಸ್.ಪಿ, ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ನುರಿತ ವೈದ್ಯರುಗಳಾದ ರಶ್ಮಿ, ಸ್ನೇಹ, ಹರೀಶ್ ಮತ್ತು ತಂಡದವರು ಮಧುಮೇಹ, ಹೃದಯ, ಕೀಲು ಮತ್ತು ಮೂಳೆ
ಕಿವಿ, ಮೂಗು, ಗಂಟಲು, ನೇತ್ರ, ಥೈರಾಯ್ಡ್, ಉಸಿರಾಟದ ಸಮಸ್ಯೆ ಕುರಿತು ತಪಾಸಣೆ ನಡೆಸಿ ಸಲಹೆ ಸೂಚನೆಗಳನ್ನು ನೀಡಿದರು.










