Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ : ಸಾರಾಯಿ ಮಾರಲು ಡಾಕ್ಟರ್ ಯಾಕೆ ಎಂದ ಬಿಜೆಪಿ..!

---Advertisement---

ಬೆಂಗಳೂರು: ಮೊದಲೇ ಸರ್ಕಾರದ ಒಳಗೆ ವರ್ಗಾವಣೆ ದಂಧೆ ನಡೀತಾ ಇದೆ ಎಂಬ ಆರೋಪ ಕೇಳಿ ಬರ್ತಾ ಇದೆ. ಈ ಬೆನ್ನಲ್ಲೇ ಪತ್ರವೊಂದು ವೈರಲ್ ಆಗಿದ್ದು, ಇನ್ನಷ್ಟು ಚರ್ಚೆಗೆ ಕಾರಣವಾಗಿದೆ. ಅಂದ್ರೆ ಮಂಡ್ಯ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರನ್ನು ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಬರೆದಿರುವ ಪತ್ರ ವೈರಲ್ ಆಗಿದೆ. ಇದು ವಿವಾದಕ್ಕೆ ಕಾರಣವಾಗಿದೆ.

ಸೋಷಿಯಲ್ ಮೀಡಿಯಾದಲ್ಲೆಲ್ಲಾ ವೈರಲ್ ಆಗಿರುವ ಶಿಫಾರಸು ಪತ್ರದಲ್ಲಿ ಪತ್ರದ ಸಂಖ್ಯೆಯಾಗಲಿ ಅಥವಾ ದಿನಾಂಕವಾಗಲಿ ನಮೂದು ಮಾಡಲಾಗಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರ ಸಹಿ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಹೀಗಾಗಿ ವರ್ಗಾವಣೆ ದಂಧೆಯ ಹಿಂದೆ ಕುಟುಂಬದವರ ಕೈವಾಡವಿದೆ ಎಂದು ಆರೋಪಿಸಲಾಗಿದೆ. ಶಿಫಾರಸು ಪತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಸುರೇಶ್ ಕುಮಾರ್ ಅವರು ವ್ಯಂಗ್ಯವಾಡಿದ್ದು, ವೈದ್ಯಾಧಿಕಾರಿಯನ್ನು ಅಬಕಾರಿ ಇಲಾಖೆಗೆ ಹಾಕುವುದು ಅತ್ಯಂತ ಅನುಚಿತ ಎಂದಿದ್ದಾರೆ.

ಶಾಸಕ ಅಭಯ್ ಪಾಟೀಲ್, ಸಾರಾಯಿ ಮಾರೋಕೆ ಡಾಕ್ಟರ್ ಯಾಕೆ..? ಇಮಾಮ್ ಸಾಬಿಗೂ ಗೋಕುಲಾಷ್ಟಮಿಗೂ ಏನು ಸಂಬಂಧ..? ಸಿಎಂಗೆ ಅರಳು ಮರಳಾಗಿದೆ. ಚಿಕಿತ್ಸೆಯ ಅಗತ್ಯವಿದೆ ಎಂದಿದ್ದಾರೆ. ಬಿಜೆಪಿ ನಾಯಕರ ಈ ಮಾತುಗಳಿಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವರ್ಗಾವಣೆ ಪತ್ರ ಅಧಿಕೃತವೋ..? ಅಲ್ಲವೋ..? ಎಂಬುದು ತಮಗೆ ತಿಳಿದಿಲ್ಲ. ಆದರೆ ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಹೋಗಲು ನಿಯಮಗಳಲ್ಲಿ ಅವಕಾಶವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಮಾಡಿರುವ ಅಭಿವೃದ್ದಿಯ ಕೆಲಸಗಳು ಚರ್ಚೆಯಾಗಬಾರದು ಅಂತ ಬಿಜೆಪಿಯವರು ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದ್ದಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now