Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕವಾಡಿಗರಹಟ್ಟಿಯಲ್ಲಿ ಆರೋಗ್ಯ ಇಲಾಖೆಯಿಂದ ಆರೋಗ್ಯ ಶಿಕ್ಷಣ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ (ಆ.04): ನಗರದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರು ಅಸ್ವಸ್ಥರಾದ ಪ್ರಕರಣದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಕವಾಡಿಗರ ಹಟ್ಟಿ ಪ್ರದೇಶದಲ್ಲಿ ಶುಕ್ರವಾರದಂದು ಸಾರ್ವಜನಿಕರಿಗೆ ಧ್ವನಿವರ್ಧಕದ ಮೂಲಕ ಆರೋಗ್ಯ ಶಿಕ್ಷಣ ನೀಡಲಾಯಿತು.

ಕವಾಡಿಗರ ಹಟ್ಟಿ ಗ್ರಾಮದಲ್ಲಿ ನೀರು ಸೇವನೆಯಿಂದ ಸಾರ್ವಜನಿಕರು ಅಸ್ವಸ್ಥರಾದ ಹಿನ್ನೆಲೆಯಲ್ಲಿ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗನಾಥ್ ಅವರ ಮಾರ್ಗದರ್ಶನದಂತೆ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳ ಕುರಿತು ಕವಾಡಿಗರ ಹಟ್ಟಿ ಪ್ರದೇಶದಲ್ಲಿ ಧ್ವನಿವರ್ಧಕದ ಮೂಲಕ ಆರೋಗ್ಯ ಶಿಕ್ಷಣ ನೀಡಲಾಯಿತು.

ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರು ಪಾಲಿಸುವುದರಿಂದ, ವಾಂತಿಭೇದಿ ಪ್ರಕರಣಗಳು ಹರಡದಂತೆ ತಡೆಗಟ್ಟಬಹುದಾಗಿದ್ದು, ಊಟ ಮಾಡುವ ಮುನ್ನ, ಶೌಚಾಲಯ ಬಳಕೆ ಮಾಡಿದ ನಂತರ, ಸೋಪಿನಿಂದ ಕೈ-ಕಾಲುಗಳನ್ನು ಚೆನ್ನಾಗಿ ಉಜ್ಜಿ ತೊಳೆದುಕೊಳ್ಳಬೇಕು, ಬಿಸಿ ಬಿಸಿ ಆಹಾರ ಪದಾರ್ಥಗಳನ್ನು ಮಾತ್ರ ಸೇವನೆ ಮಾಡಬೇಕು, ತಂಗಳು ತಡಿಗಳನ್ನ ತಿನ್ನಬಾರದು.  ಹಣ್ಣು ತರಕಾರಿಗಳನ್ನ ಉಪ್ಪು ನೀರಿನಿಂದ ತೊಳೆದು ಉಪಯೋಗಿಸಬೇಕು, ಆಹಾರ ಪದಾರ್ಥಗಳ ಮೇಲೆ ನೊಣಗಳು ಕೂರದಂತೆ ಮುಚ್ಚಿಟ್ಟು ಬಳಸಬೇಕು, ಕಾಯಿಸಿ ಆರಿಸಿದ ನೀರನ್ನು ಮಾತ್ರ ಕುಡಿಯಬೇಕು.

ಎಲ್ಲೆಂದರಲ್ಲಿ ಬಯಲಿನಲ್ಲಿ ಮಲ, ಮೂತ್ರ ವಿಸರ್ಜನೆ ಮಾಡದೆ ಶೌಚಾಲಯಗಳನ್ನೇ ಬಳಸಬೇಕು.  ಶೌಚಾಲಯಗಳ ಸ್ವಚ್ಛತೆ, ಪರಿಸರ ಸ್ವಚ್ಛತೆ, ವಯಕ್ತಿಕ ಸ್ವಚ್ಛತೆ ಕಾಪಾಡಿಕೊಂಡು ಕಾಯಿಸಿ, ಆರಿಸಿದ ಶುದ್ಧ ನೀರನ್ನ ಕುಡಿಯಬೇಕು.   ಯಾರಿಗಾದರೂ ವಾಂತಿಭೇದಿ ಆದಲ್ಲಿ ಕವಾಡಿಗರ ಹಟ್ಟಿ ಪ್ರದೇಶದಲ್ಲಿನ ಅಂಗನವಾಡಿ ಕೇಂದ್ರದಲ್ಲಿ ತುರ್ತು ಚಿಕಿತ್ಸಾ ಸೌಲಭ್ಯವನ್ನು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವಂತೆ ತೆರೆಯಲಾಗಿದ್ದು, ಅದರ ಸದುಪಯೋಗಪಡಿಸಿಕೊಳ್ಳಬೇಕು.

ಯಾರೂ ಕೂಡ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ವಾಂತಿಭೇದಿ ಪ್ರಕರಣಗಳು ಬಾರದಂತೆ ಕಡಿವಾಣ ಹಾಕಲು ಸಾರ್ವಜನಿಕರು ಸಹಕರಿಸಬೇಕು ಎಂಬುದಾಗಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಹಾಗೂ ಸಿಬ್ಬಂದಿ ಲಿಂಗೇಶ್ ಅವರ ಮೂಲಕ ಧ್ವನಿವರ್ಧಕದಲ್ಲಿ ಕವಾಡಿಗರ ಹಟ್ಟಿ ಪ್ರದೇಶದಲ್ಲಿ ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment