Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ನಾಳೆ ಮೊಳಕಾಲ್ಮೂರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

---Advertisement---

 

ಚಿತ್ರದುರ್ಗ. ಅ.16: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಅ. 17 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಮೊಳಕಾಲ್ಮೂರು ತಾಲ್ಲೂಕು ಹಾನಗಲ್‍ಗೆ ಆಗಮಿಸಿ, ಇಲ್ಲಿನ ನಿರೀಕ್ಷಣ ಮಂದಿರಕ್ಕೆ ತೆರಳುವರು.  ಬಳಿಕ ಮೊಳಕಾಲ್ಮೂರಿಗೆ ತೆರಳಿ, ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು.  ನಂತರ ಇಲ್ಲಿನ ಪಕ್ಷದ ಕಚೇರಿಗೆ ಭೇಟಿ ನೀಡಿ, ಬೆಳಿಗ್ಗೆ 11.30 ಗಂಟೆಗೆ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ಹಿಂದಿರುಗುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now