ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ (ಆ. 04) : ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ. 05 ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ಬೆ. 10.30 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸುವರು. ಬಳಿಕ ಕವಾಡಿಗರ ಹಟ್ಟಿಗೆ ತೆರಳಿ ಕಲುಷಿತ ನೀರು ದುರಂತಲ್ಲಿ ಸಾವನ್ನಪ್ಪಿದ ಕುಟುಂಬದವರ ಮನೆಗಳಿಗೆ ಭೇಟಿ ನೀಡುವರು. ನಂತರ ಬಸವೇಶ್ವರ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಕಲುಷಿತ ನೀರು ಪ್ರಕರಣದಲ್ಲಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸುವರು. ಸಚಿವರು ಬಳಿಕ ಬೆಂಗಳೂರಿಗೆ ಹಿಂದಿರುಗುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















