Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರೋಗ್ಯ, ಉದ್ಯೋಗವಲ್ಲ… ‘ಆ ಹುಡುಗಿಯಿಂದ ಕಾಪಾಡಿ’ ಎಂದ ಭಕ್ತ; ವೈರಲ್ ಆಯ್ತು ಹರಕೆ ಪತ್ರ

---Advertisement---

ಆರೋಗ್ಯ, ಉದ್ಯೋಗ, ಮದುವೆ ಅಥವಾ ಕುಟುಂಬದ ಸಮಸ್ಯೆಗಳ ಪರಿಹಾರಕ್ಕಾಗಿ ದೇವರಿಗೆ ಹರಕೆ ಪತ್ರ ಬರೆಯುವುದು ಸಾಮಾನ್ಯ. ಆದರೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಹುಂಡಿಯಲ್ಲಿ ಪತ್ತೆಯಾದ ಹರಕೆ ಪತ್ರವೊಂದು ಭಕ್ತರನ್ನು ಅಚ್ಚರಿಗೆ ದೂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ಮಠದ ಹುಂಡಿ ಎಣಿಕೆ ವೇಳೆ ಅನಾಮಧೇಯ ಭಕ್ತನೊಬ್ಬ ಬರೆದಿದ್ದ ಪತ್ರ ಪತ್ತೆಯಾಗಿದೆ. ಪತ್ರದ ಆರಂಭದಲ್ಲಿ “ಶ್ರೀ ಗಣಪತಿಯೇ ನಮಃ” ಹಾಗೂ “ಓಂ ಶ್ರೀ ರಾಘವೇಂದ್ರಾಯ ನಮಃ” ಎಂದು ಬರೆದು, ಬಳಿಕ ತನ್ನ ವೈಯಕ್ತಿಕ ಸಂಕಷ್ಟವನ್ನು ರಾಯರ ಮುಂದೆ ಮನಬಿಚ್ಚಿ ಬರೆದಿದ್ದಾನೆ.ಪತ್ರದಲ್ಲಿ, “ರಾಯರೇ ನಮ್ಮನ್ನು ಆ ವಿಷದಿಂದ ಕಾಪಾಡು… ರಾಯರೇ ಆ ಹುಡುಗಿಯಿಂದ ನಮ್ಮನ್ನು ಕಾಪಾಡು… ಈ ಕಷ್ಟದಿಂದ ನಮ್ಮನ್ನು ಪಾರು ಮಾಡು. ನಮ್ಮ ಜೊತೆ ರಾಯರಿದ್ದಾರೆ ಎಂಬ ನಂಬಿಕೆಯಿಂದ ನನ್ನ ನೋವನ್ನು ಹೇಳಿಕೊಳ್ಳುತ್ತಿದ್ದೇನೆ. ಗುರುಗಳೇ, ಆದಿಶಕ್ತಿ ದೇವಿ, ತಂದೆ-ತಾಯಿ ಕಾಪಾಡಿ” ಎಂದು ಭಾವನಾತ್ಮಕವಾಗಿ ಮನವಿ ಮಾಡಲಾಗಿದೆ.

ವಿಶೇಷವೆಂದರೆ, ಪತ್ರದಲ್ಲಿ ಹೆಸರು, ವಿಳಾಸ ಅಥವಾ ಯಾವುದೇ ವೈಯಕ್ತಿಕ ವಿವರಗಳನ್ನು ಉಲ್ಲೇಖಿಸಿಲ್ಲ. ಆದರೂ ಅದರಲ್ಲಿರುವ ಮನವಿಯ ಶೈಲಿ ಮತ್ತು “ಆ ಹುಡುಗಿಯಿಂದ ಕಾಪಾಡಿ” ಎಂಬ ಸಾಲು ಭಕ್ತರು ಹಾಗೂ ನೆಟ್ಟಿಗರ ಗಮನ ಸೆಳೆದಿದೆ.ಈ ವಿಚಿತ್ರ ಹರಕೆ ಪತ್ರ ಮಠದ ಸಿಬ್ಬಂದಿಯನ್ನಷ್ಟೇ ಅಲ್ಲ, ಭಕ್ತರಲ್ಲೂ ಕುತೂಹಲ ಮೂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now