ಏಪ್ರಿಲ್ 21 ರಂದು ಆರೋಗ್ಯ ಸಂಜೀವಿನ ಯೋಜನೆ ಜಾರಿ: ಸಿ.ಎಸ್.ಷಡಾಕ್ಷರಿ

2 Min Read

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 15 : ಬರುವ ಏಪ್ರಿಲ್ 21 ಸರ್ಕಾರಿ ನೌಕರರ ದಿನಾಚರಣೆಯಂದು ರಾಜ್ಯ ಸರ್ಕಾರ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಿದೆ. ಈಗಾಗಲೇ ಮುಖ್ಯಮಂತ್ರಿಗಳು ಯೋಜನೆ ಜಾರಿ ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಂಜೀವಿನಿ ಯೋಜನೆಯಿಂದ ಸರ್ಕಾರಿ ನೌಕರರರು ಹಾಗೂ ಅವರ ಅವಲಂಬಿತರಿಗೆ ನಗದು ರಹಿತ ಉಚಿತ ಆರೋಗ್ಯ ಸೇವೆ ದೊರಕಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ
ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ನಡುವೆಯೂ 7ನೇ ವೇತನ ಆಯೋಗ ಶಿಫಾರಸ್ಸನ್ನು ಜಾರಿ ಮಾಡಿದೆ. ಇದರೊಂದಿಗೆ ಆರೋಗ್ಯ ಸಂಜೀವಿನಿ ಯೋಜನೆಗೂ ಅನುಮತಿ ನೀಡಿದೆ. ಸರ್ಕಾರಿ ನೌಕರರಿಗೆ ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಸ್ಯಾಲರಿ ಪ್ಯಾಕಜ್ ಅಕೌಂಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಈ ಯೋಜನೆಯಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆ ಅಪಘಾತದಲ್ಲಿ ಮೃತಪಟ್ಟರೆ ರೂ.1 ಕೋಟಿ ಪರಿಹಾರ ನೀಡಲಾಗುವುದು. ಅಂಗವೈಕಲ್ಯತೆಗೆ ಒಳಗಾದರೆ ರೂ.35 ಲಕ್ಷದ ವರೆಗೆ ಪರಿಹಾರ ದೊರಕಲಿದೆ. ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ, ಗೃಹ, ಹಾಗೂ ವಾಹನ ಸಾಲ ಸೌಲಭ್ಯ ನೀಡಲಾಗುವುದು. ಇದೇ ತಿಂಗಳ ಅಂತ್ಯಕ್ಕೆ ನಿವೃತ್ತ ಐ.ಎ.ಎಸ್ ಅಧಿಕಾರಿ ಪರ್ವೇಜ್ ಅವರ ನೇತೃತ್ವದ ಎನ್.ಪಿ.ಎಸ್ ಕಮಿಟಿ ತನ್ನ ವರದಿಯನ್ನು ಸರ್ಕಾರಕ್ಕೆ ನೀಡಲಿದೆ. ನಂತರ ಸರ್ಕಾರದ ಮನವೊಲಿಸಿ, ಎನ್.ಪಿ.ಎಸ್. ರದ್ದುಪಡಿಸಿ ಒಪಿಎಸ್ ಜಾರಿಗೊಳಿಸಲು ಪ್ರಯತ್ನಿಸುವುದಾಗಿ ಸಿ.ಎಸ್.ಷಡಾಕ್ಷರಿ ತಿಳಿಸಿದರು.

ಮುಂಬರುವ ಮೇ ನಲ್ಲಿ ಶಿವಮೊಗ್ಗ ನಗರದಲ್ಲಿ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗುವುದು. ಸರ್ಕಾರಿ ನೌಕರರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಗಮನ ಹರಿಸಬೇಕು. ನೌಕರರು ಆತ್ಮ ವಂಚನೆ ಮಾಡಿಕೊಳ್ಳದೆ, ಕಚೇರಿ ಕೆಲಸಗಳನ್ನು ಶ್ರದ್ಧೆಯಿಂದ ನಿರ್ವಹಸುವಂತೆ ಸಿ.ಎಸ್.ಷಡಾಕ್ಷರಿ ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಜಿಲ್ಲೆಯ ನೌಕರ ಕ್ರೀಡಾಪಟುಗಳಿಗೆ ಸನ್ಮಾನಿಸಲಾಯಿತು. ಜಿಲ್ಲಾಧ್ಯಕ್ಷ ಮಾಲತೇಶ್ ಮುದಜ್ಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ
ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಉಪವಿಭಾಗಾಧಿಕಾರಿ ಮಹಿಬೂಬ್ ಜಿಲಾನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ಎಂ.ನೆಲವಗಿ ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವಿವಿಧ ಪದಾಧಿಕಾರಿಗಳು, ತಾಲ್ಲೂಕು ನೌಕರರ ಸಂಘದ ಅಧ್ಯಕ್ಷರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *