ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್ ಗೆ ಹೃದಯಾಘಾತವಾಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಸುಶ್ಮಿತಾ ಸೇನ್ ಅವರೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಆಸ್ಪತ್ರೆಯಿಂದ ಮನೆಗೂ ತೆರಳಿದ್ದಾರೆ.
ಎರಡ್ಮೂರು ದಿನಗಳ ಹಿಂದೆಯೇ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೂಡ ಕೊಡಿಸಿದ್ದಾರೆ. ಆದ್ರೆ ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದಂತೆ ಎಲ್ಲರೂ ಪ್ರಶ್ನಿಸಿದ್ದಾರೆ. ಹಾರ್ಟ್ ಅಟ್ಯಾಕ್ ಆಗುವುದಕ್ಕೆ ಅಂಥದ್ದೇನಾಯ್ತು..? ಯಾವಾಗ ಆಯ್ತು..? ಇಷ್ಟು ತಡವಾಗಿ ಯಾಕೆ ಹೇಳ್ತಾ ಇದ್ದೀರಾ..? ಎಂಬಿತ್ಯಾದಿ ಪ್ರಶ್ನೆಗಳನ್ನು ಸೋಷಿಯಲ್ ಮೀಡಿಯಾದಲ್ಲಿಯೇ ಕೇಳಿದ್ದಾರೆ.
ಇನ್ನು ಹಾರ್ಟ್ ಅಟ್ಯಾಕ್ ವಿಚಾರ ಮಾತನಾಡಿರುವ ಸುಶ್ಮಿತಾ ಸೇನ್, ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದಿದ್ದು, ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವೈದ್ಯರ ಬಗ್ಗೆಯೂ ಮಾತನಾಡಿ, ಅವರು ಸೂಕ್ತ ಚಿಕಿತ್ಸೆ ನೀಡಿದ ಕಾರಣ ಗುಣಮುಖರಾಗಿದ್ದೇನೆ ಎಂದಿದ್ದಾರೆ.