ಸುದ್ದಿಒನ್, ಹಿರಿಯೂರು, ಡಿಸೆಂಬರ್.14 : ತೋಟದ ಜಮೀನಿನಲ್ಲಿ ಗೋವುಗಳ ಗಂಜು ಸಂಗ್ರಹಿಸಿದ್ದ ಗುಂಡಿಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ.
ತಾಲೂಕಿನ ಗೌಡನಹಳ್ಳಿಯಲ್ಲಿ ಗುರುವಾರ ನಡೆದಿದ್ದು, ಮೃತರನ್ನು ತಂದೆ ಮಹಾಲಿಂಗಪ್ಪ (52) ಮತ್ತು ಮಗ ಪೃಥ್ವಿ (23) ಎಂದು ಗುರುತಿಸಲಾಗಿದೆ.

ಅಡಿಕೆ ಸಸಿಗಳಿಗಾಗಿ ಸಿಂಪಡಿಸಲು ಹಸುಗಳ ಗಂಜಲನ್ನು ಸುಮಾರು 8 ಅಡಿ ಆಳದ ಗುಂಡಿಯಲ್ಲಿ ಸಂಗ್ರಹಿಸಿದ್ದರು. ಆಕಸ್ಮಿಕವಾಗಿ ಗಂಜಲಿನ ತೊಟ್ಟಿಗೆ ತಂದೆ ಬಿದ್ದಿದ್ದಾರೆ. ತಂದೆಯನ್ನು ರಕ್ಷಸಿಸಲು ಹೋದ ಮಗ ಪೃಥ್ವಿ ಸಹ ಬಿದ್ದು ಇಬ್ಬರೂ ಮೃತಪಟ್ಟಿದ್ದಾರೆ.
ಹಿರಿಯೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರದ ಕೊಠಡಿಗೆ ತಹಶೀಲ್ದಾರ್ ರಾಜೇಶ್ ಕುಮಾರ್ ಅವರು ಭೇಟಿ ನೀಡಿ ಪರಿಶೀಲಿಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















