Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉರ್ದು ಟೀಚರ್ಸ್ ಅಸೋಸಿಯೇಷನ್‍ನಿಂದ ಡಿಡಿಪಿಐ ರವಿಶಂಕರ್ ರೆಡ್ಡಿಯವರಿಗೆ ಹೃದಯಸ್ಪರ್ಶಿ ಸನ್ಮಾನ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 07 : ಇದೆ ತಿಂಗಳು ಕರ್ತವ್ಯದಿಂದ ವಯೋ ನಿವೃತ್ತಿಯಾಗಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್‍ರೆಡ್ಡಿಗೆ ಕರ್ನಾಟಕ ರಾಜ್ಯ ಉರ್ದು ಟೀಚರ್ಸ್ ಅಸೋಸಿಯೇಷನ್‍ನಿಂದ ಬಡಾ ಮಕಾನ್‍ನಲ್ಲಿ ಗುರುವಾರ ಹೃದಯಸ್ಪರ್ಶಿಯಾಗಿ ಸನ್ಮಾನಿಸಲಾಯಿತು.

ಮೈಸೂರು ಪೇಟ, ಶಾಲು, ಬೃಹಧಾಕಾರವಾದ ಹೂವಿನ ಹಾರ ಹಾಕಿ ಉರ್ದು ಶಿಕ್ಷಕರುಗಳು ಸನ್ಮಾಸಿ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಿ.ಡಿ.ಪಿ.ಐ. ಕೆ.ರವಿಶಂಕರ್‍ರೆಡ್ಡಿ ಯಾವುದೇ ಕೈಗಾರಿಕೆ, ನೀರಾವರಿ ಸೌಲಭ್ಯಗಳಿಲ್ಲದ ಬರದ ನಾಡು ಚಿತ್ರದುರ್ಗ ಜಿಲ್ಲೆ ಅಭಿವೃದ್ದಿಯಾಗಬೇಕಾದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ಶಿಕ್ಷಕರುಗಳಿಗೆ ಕರೆ ನೀಡಿದರು.

ಶಿಕ್ಷಕರ ಸಂಘದ ಹೋರಾಟಕ್ಕೆ ಅಗಾಧವಾದ ಶಕ್ತಿಯಿದೆ. ನನ್ನ ಹಿಂದೆ ಶಿಕ್ಷಕರ ದೊಡ್ಡ ಪಡೆಯಿದೆ. ನನ್ನ ಕರ್ಮಭೂಮಿ, ಜನ್ಮಭೂಮಿ ಚಿತ್ರದುರ್ಗವನ್ನು ಎಂದಿಗೂ ಮರೆಯುವುದಿಲ್ಲ. ಸರ್ಕಾರಿ ನೌಕರಿ ಎಂದರೆ ನಿವೃತ್ತಿಯಾಗಲೇಬೇಕು. ಹಾಗಂತ ಮನಸ್ಸಿಗೆ ಬೇಸರಪಟ್ಟುಕೊಳ್ಳುವುದು ಸರಿಯಲ್ಲ. ಶಿಕ್ಷಕರುಗಳ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ದೊರಕಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಅನುಭವದ ಆಧಾರದ ಮೇಲೆ ಆಡಳಿತ ನಡೆಸಿದ್ದೇನೆ. ದುಃಖ ದುಮ್ಮಾನಗಳನ್ನು ಹೊತ್ತು ಬಂದವರಿಗೆ ಸ್ಪಂದಿಸಿದ್ದೇನೆಂಬ ಆತ್ಮತೃಪ್ತಿಯಿದೆ. ನಿವೃತ್ತಿಯ ನಂತರವೂ ಚಟುವಟಿಕೆಯಿಂದ ಇರುತ್ತೇನೆಂದು ಹೇಳಿದರು.

ಶಿಕ್ಷಣ ಇಲಾಖೆ ದೊಡ್ಡದು. ಜೀವನದಲ್ಲಿ ಪಶ್ಚಾತಾಪ ಪಟ್ಟುಕೊಳ್ಳುವಂತ ಕೆಲಸ ಯಾರು ಮಾಡಬಾರದು. ಸಕಾರಾತ್ಮಕ ಚಿಂತನೆಯಿದ್ದರೆ ಜೀವನದಲ್ಲಿ ಯಶಸ್ಸು ಕಾಣಬಹುದು. ಅಬ್ದುಲ್ ಕಲಾಂರಂತ ವ್ಯಕ್ತಿಗಳನ್ನು ಸೃಷ್ಟಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ. ಮಕ್ಕಳಿಗೆ ಪುಸ್ತಕ ಓದುವ ಹವ್ಯಾಸ ರೂಢಿಸಿ ಎಂದು ಕಿವಿಮಾತು ಹೇಳಿದರು.

ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಸ್ನೇಹಜೀವಿ, ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್‍ರೆಡ್ಡಿರವರಲ್ಲಿ ಎಲ್ಲರನ್ನು ಸಮಾನವಾಗಿ ಕಾಣುವ ಗುಣವಿರುವುದರಿಂದ ಎಲ್ಲರ ಮನಸ್ಸು ಮುಟ್ಟಿದ್ದಾರೆ. ಸಾಮಾನ್ಯರಲ್ಲಿ ಸಾಮಾನ್ಯರಾಗಿ ಕೆಲಸ ಮಾಡಿದ್ದಾರೆ. ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಸಿದ್ದಪಡಿಸುವ ಕೆಲಸ ಶಿಕ್ಷಕರುಗಳಿಂದ ಮಾತ್ರ ಸಾಧ್ಯ ಎಂದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಂತೇಶ್ ಮಾತನಾಡುತ್ತ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆಯನ್ನು ಒಂದನೆ ಸ್ಥಾನಕ್ಕೆ ತರುವಲ್ಲಿ ಶ್ರಮಿಸಿ ರಾಜ್ಯದಲ್ಲಿಯೇ ಜಿಲ್ಲೆಯ ಹೆಸರನ್ನು ಮೊಳಗಿಸಿರುವ ಡಿ.ಡಿ.ಪಿ.ಐ. ಕೆ.ರವಿಶಂಕರ್‍ರೆಡ್ಡಿ ಶಿಕ್ಷಕರುಗಳಲ್ಲಿ ಶಿಕ್ಷಕರಾಗಿ ಮಕ್ಕಳಲ್ಲಿ ಮಕ್ಕಳಾಗಿ ಬೆರೆತಿದ್ದಾರೆ. ಶಿಕ್ಷಕರುಗಳ ಸಂಘಟನೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಪದವೀಧರ ಶಿಕ್ಷಕರುಗಳಿಗೆ ಬಡ್ತಿ, ಎನ್.ಪಿ.ಎಸ್. ಸಹ ಶಿಕ್ಷಕರುಗಳಿಂದ ಮುಖ್ಯ ಶಿಕ್ಷಕರಿಗೆ ಬಡ್ತಿ, ಏಳನೆ ವೇತನ ಆಯೋಗ, ಉರ್ದು ಶಾಲೆಗಳಲ್ಲಿನ ಸಮಸ್ಯೆ ಇವುಗಳಿಗೆ ಪರಿಹಾರ ಕಂಡುಕೊಳ್ಳಲು ನಮ್ಮ ಹೋರಾಟ ನಿರಂತರವಾಗಿರುತ್ತದೆ. ಮಕ್ಕಳ ಗುಣಾತ್ಮಕ ಶಿಕ್ಷಣಕ್ಕೆ ಶಿಕ್ಷಕರುಗಳು ಒತ್ತು ಕೊಡಬೇಕೆಂದು ತಿಳಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್ ಕುಮಾರ್, ಡಿ.ವೈ.ಪಿ.ಸಿ. ವೆಂಕಟೇಶಪ್ಪ, ಕೆಂಚಪ್ಪ, ಇ.ಸಿ.ಓ. ಸಮೀರ ಇವರುಗಳು ಮಾತನಾಡಿದರು.

ತಾಜಿರ್‍ಭಾಷ, ಪರ್ವಿನ್‍ತಾಜ್, ಎಂ.ಎಸ್.ಲತ, ಉಮರ್‍ಭಾಷ, ಕರ್ನಾಟಕ ರಾಜ್ಯ ಉರ್ದು ಟೀಚರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!