Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರು ಸೇರಿ ರಾಜ್ಯಾದ್ಯಂತ ಇಂದು ಭಾರಿ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

---Advertisement---

ಸುದ್ದಿಒನ್,ಬೆಂಗಳೂರು,ಜೂನ್.1: ರಾಜ್ಯಾದ್ಯಂತ ಮುಂಗಾರು ಪೂರ್ವ ಮಾರುತಗಳು ಭರ್ಜರಿಯಾಗಿ ಬೀಸುತ್ತಿದ್ದು, ವರುಣನ ಅಬ್ಬರ ಜೋರಾಗಿದೆ. ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿರಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಒಟ್ಟು ಏಳು ಜಿಲ್ಲೆಗಳಿಗೆ ಈಗಾಗಲೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಮೈಸೂರು, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ ಹಾಗೂ ತುಮಕೂರಿನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮಳೆಯ ಜೊತೆಗೆ ಗಂಟೆಗೆ ಸುಮಾರು 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಓಡಾಡದೆ ಸುರಕ್ಷಿತವಾಗಿರಲು ಕೋರಲಾಗಿದೆ.

ಇತ್ತ ಉತ್ತರ ಒಳನಾಡಿನ ಭಾಗದಲ್ಲೂ ಮೋಡ ಕವಿದ ವಾತಾವರಣವಿದ್ದು, ಮಳೆಯ ಮುನ್ಸೂಚನೆ ಸಿಕ್ಕಿದೆ. ಬೆಳಗಾವಿ, ಧಾರವಾಡ, ಕಲಬುರಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್‌ನಷ್ಟು ತೀವ್ರ ವೇಗದಲ್ಲಿ ಗಾಳಿ ಬೀಸಲಿದೆ. ಇದರೊಂದಿಗೆ ಈ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಹವಾಮಾನ ಎಂದಿನಂತೆ ಸಾಧಾರಣವಾಗಿರಲಿದೆ.

ಕರಾವಳಿ ತೀರ ಪ್ರದೇಶಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಸದ್ಯಕ್ಕೆ ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಮೋಡ ಕವಿದ ತಂಪಾದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

Join WhatsApp

Join Now

Join Telegram

Join Now