Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

---Advertisement---

ಬೆಂಗಳೂರು.ಸೆಪ್ಟೆಂಬರ್ 28 : ರಾಜ್ಯದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ವಾತಾವರಣದ ವೈಪರೀತ್ಯ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಈ ವಾರ ಕರ್ನಾಟಕದ ಹಲವೆಡೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಆರ್ಭಟ ಗರಿಷ್ಠ ಮಟ್ಟದಲ್ಲಿರಲಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ವಾರವಿಡೀ ಧಾರಾಕಾರ ಮಳೆ ಮುಂದುವರಿಯಲಿದ್ದು,ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ತುಮಕೂರು ಭಾಗಗಳಲ್ಲೂ ಉತ್ತಮ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯವಾಗಿ ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಭಾರಿ ಮಳೆ ಬೀಳುವ ನಿರೀಕ್ಷೆಯಿದ್ದು, ರಸ್ತೆ ಜಲಾವೃತ ಮತ್ತು ಸಂಚಾರ ದಟ್ಟಣೆಯ ಸಮಸ್ಯೆ ಎದುರಾಗಬಹುದು.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಆರಂಭದಲ್ಲಿ ಬಿಸಿಲು-ಮೋಡದ ವಾತಾವರಣವಿದ್ದು, ವಾರದ ಮಧ್ಯಭಾಗದಿಂದ ಚದುರಿದಂತೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.

Join WhatsApp

Join Now

Join Telegram

Join Now