ಸುದ್ದಿಒನ್,ಬೆಂಗಳೂರು,ಮೇ.15 : ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ 72 ಗಂಟೆಗಳ ಕಾಲ ‘ಯಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಈ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ವಾಯುಭಾರ ಕುಸಿತದ ಪರಿಣಾಮವಾಗಿ ವ್ಯಾಪಕ ಮಳೆಯಾಗಲಿದೆ.ಕರಾವಳಿ ತೀರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿರಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ತುಮಕೂರು, ಮಂಡ್ಯ ಮತ್ತು ರಾಮನಗರಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಗದಗ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಬಳ್ಳಾರಿ, ವಿಜಯನಗರ ಹಾಗೂ ಹಾವೇರಿ ಜಿಲ್ಲೆಗಳಲ್ಲೂ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








