ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಜೋರು ಮಳೆಯಾಗುತ್ತಿದೆ. ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಅಂತಾನೇ ಹವಮಾನ ಇಲಾಖೆ ವರದಿ ನೀಡಿದೆ. ಇಂದು ಸಹ ನಾನಾ ಭಾಗದಲ್ಲಿ ಮಳೆಯಾಗಲಿದೆ ಎಂದು ವರದಿ ನೀಡಿದೆ. ಮಧ್ಯಾಹ್ನದ ವೇಳೆಗೆ ಅದಾಗಲೇ ಜೋರು ಮಳೆಯಾಗಿದ್ದು, ಬಂದು ನಿಂತಿದೆ. ಮಧ್ಯಾಹ್ನದ ವೇಳೆಗೆ ಮಳೆ ಬಂದ ಕಾರಣ, ಕಚೇರಿಗೆ ಹೋಗುವವರು, ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದರು.
ಸೆಪ್ಟೆಂಬರ್ 7ರವರೆಗೂ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಸೈಕ್ಲೋನ್ ಎಫೆಕ್ಟ್ ನಿಂದಾಗಿ ಮಳೆ ಬರ್ತಾ ಇದೆ. ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಸಮಸ್ಯೆಗಳು ಆಗಿವೆ. ಇಂದು ಸುರಿದ ಮಳೆಯಿಂದಾಗಿ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಕಷ್ಟು ಮುಂಜಾಗ್ರತ ಕ್ರಮವನ್ನ ವಹಿಸಲಾಗಿದೆ. ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆಯ ಕಾರಣ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದಾಗಿ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ವರದಿಯನ್ನ ಹವಮಾನ ಇಲಾಖೆ ಸೂಚನೆ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














