ಸುದ್ದಿಒನ್,ಬೆಂಗಳೂರು,ಮೇ.12: ರಾಜ್ಯದಲ್ಲಿ ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನತೆಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಮುಂದಿನ 4 ರಿಂದ 5 ದಿನಗಳ ಕಾಲ ರಾಜ್ಯದಾದ್ಯಂತ ಗುಡುಗು, ಮಿಂಚು ಸಹಿತ ಭರ್ಜರಿ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮೇ 11 ರಿಂದ 15 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಮೇ 15 ಮತ್ತು 16 ರಂದು ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿರಲಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮೇ 15 & 16: ತುಮಕೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ವಿಜಯನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಶಿವಮೊಗ್ಗ, ಹಾಸನ, ಕೊಡಗು, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಲ್ಲಿ ಗುರುವಾರದಿಂದಲೇ ಮಳೆ ಆರಂಭವಾಗಲಿದ್ದು, ವಾರಾಂತ್ಯದವರೆಗೂ ಮುಂದುವರಿಯಲಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಮೇ 11 ರಿಂದ 13 ರವರೆಗೆ ಗುಡುಗು ಸಹಿತ ಮಳೆಯಾಗಲಿದೆ. ಆದರೆ, ಇದೇ ಸಮಯದಲ್ಲಿ ಉತ್ತರ ಒಳನಾಡಿನ ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರಲಿದ್ದು, ಮುಂದಿನ 5 ದಿನಗಳಲ್ಲಿ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ವರದಿಯಾಗಿದೆ.
ಮೇ 17ರ ಭಾನುವಾರದಂದು ಬೆಂಗಳೂರು ಸೇರಿದಂತೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರದಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಹಗುರ ಮಳೆಯ ನಿರೀಕ್ಷೆಯಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








