Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

---Advertisement---

ಸುದ್ದಿಒನ್,ಬೆಂಗಳೂರು,ಮೇ.27 :ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಕ್ಷರಶಃ ರೌದ್ರಾವತಾರ ತಾಳಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರಕ್ಕೆ ಜನಜೀವನ ತತ್ತರಿಸಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ಮತ್ತೊಂದು ಪ್ರಮುಖ ಎಚ್ಚರಿಕೆಯನ್ನು ನೀಡಿದ್ದು, ಮೇ 30ರ ತನಕ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಜೊತೆಗೆ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ಮೇ 27 ರಂದು ಹಲವು ಜಿಲ್ಲೆಗಳಲ್ಲಿ ‘ಯೆಲ್ಲೋ’ ಮತ್ತು ‘ಆರೆಂಜ್’ ಅಲರ್ಟ್ ಘೋಷಿಸಿದೆ. ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಓಡಾಡದಂತೆ ಹಾಗೂ ಸುರಕ್ಷಿತವಾಗಿರುವಂತೆ ಸೂಚಿಸಲಾಗಿದೆ.

ಮೇ 28ರ ವರೆಗೆ ಉತ್ತರ ಒಳನಾಡಿನ ಹಲವೆಡೆ ಭೀಕರ ಗಾಳಿ ಬೀಸಲಿದ್ದು, ಗಾಳಿಯ ವೇಗ ಗಂಟೆಗೆ ಬರೋಬ್ಬರಿ 50 ರಿಂದ 60 ಕಿಲೋಮೀಟರ್ ಇರಲಿದೆ ಎಂದು ಅಂದಾಜಿಸಲಾಗಿದೆ. ಮೇ 27 ರಂದು ಇಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ದಟ್ಟವಾಗಿದ್ದು, ‘ಆರೆಂಜ್ ಅಲರ್ಟ್’ ಜಾರಿಯಲ್ಲಿದೆ.ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಸುಂಟರಗಾಳಿ ಬೀಸಲಿದ್ದು, ಮೇ 27 ರಂದು ಭಾರಿ ಮಳೆಯಾಗುವ ಮುನ್ಸೂಚನೆಯೊಂದಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.

ಇತ್ತ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲೂ ಮಳೆಯ ಆರ್ಭಟ ಮುಂದುವರಿಯಲಿದೆ. ಮೇ 26 ರಿಂದ ಮೇ 30ರ ವರೆಗೆ ಕರಾವಳಿಯ ಬಹುತೇಕ ಕಡೆಗಳಲ್ಲಿ ಗುಡುಗು ಮತ್ತು ಮಿಂಚಿನ ಸಹಿತ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಇಂದು ಸಂಜೆಯ ವೇಳೆಗೆ ವಾತಾವರಣದಲ್ಲಿ ಭಾಗಶಃ ಮೋಡ ಕವಿಯಲಿದ್ದು, ತಣ್ಣನೆಯ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಕಾರ್ಮಿಕರಿಗೆ ಸಿಹಿ ಸುದ್ದಿ: ಕನಿಷ್ಠ ವೇತನ ಸರಾಸರಿ ಶೇ.60 ರಷ್ಟು ಹೆಚ್ಚಳ

ಬ್ರೇಕ್‌ಫಾಸ್ಟ್ ಟೇಬಲ್‌ನಲ್ಲೇ ಪವರ್ ಪಾಲಿಟಿಕ್ಸ್; ಸಿದ್ದರಾಮಯ್ಯ ಮುಂದಿನ ನಡೆ ಏನು?

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್: ಈ ಕೆಲಸ ಮಾಡದಿದ್ದರೆ ನಿಲ್ಲುತ್ತೆ ತಿಂಗಳ 2000 ರೂಪಾಯಿ!

ಮಳೆನೀರು ಕೊಯ್ಲು ಮೂಲಕ ನೀರಿನ ಸ್ವಾವಲಂಬನೆ ಸಾಧಿಸಿದ ಚಿತ್ರದುರ್ಗದ ರೇಖಾ ರಾಜ್ ಕುಮಾರ್: ‘ಸುದ್ದಿಒನ್ ನೀರು ಉಳಿಸಿ ನೆಲದ ಋಣ ತೀರಿಸಿ’ ಅಭಿಯಾನಕ್ಕೆ ಶ್ಲಾಘನೆ

ಕರ್ನಾಟಕ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್ : ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಡಿಕೆಶಿ ಪಟ್ಟಾಭಿಷೇಕಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್!

ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗದ ಆಮಿಷ ; ವಂಚಕರಿಂದ ಎಚ್ಚರವಹಿಸಿ : ಡಾ.ಯುವರಾಜ್