Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ : ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

---Advertisement---

ಮಂಗಳೂರು.ಜುಲೈ.23: ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಪ್ರಕಟಿಸಿದೆ.

ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಯಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ ಈ ತುರ್ತು ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸ್ಪಷ್ಟ ನಿರ್ದೇಶನ ನೀಡಿದ್ದು, ಅಂಗನವಾಡಿ, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ-ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು 12ನೇ ತರಗತಿವರೆಗಿನ ಪಿಯು ಕಾಲೇಜುಗಳಿಗೆ ಜುಲೈ 23ರಂದು ರಜೆ ಅನ್ವಯವಾಗಲಿದೆ. ಆದೇಶ ಉಲ್ಲಂಘಿಸಿ ತರಗತಿ ನಡೆಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಲಾಗಿದೆ.

ಮಳೆಯ ತೀವ್ರತೆ ಹೆಚ್ಚಿರುವ ಕಾರಣ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ನೀರು ತುಂಬಿದ ತಗ್ಗು ಪ್ರದೇಶಗಳು, ನದಿ ಮತ್ತು ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪೋಷಕರು ಎಚ್ಚರ ವಹಿಸಬೇಕೆಂದು ಸೂಚಿಸಲಾಗಿದೆ. ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದೆಂದು ಹವಾಮಾನ ಇಲಾಖೆ ವಿನಂತಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಆದೇಶಿಸಲಾಗಿದೆ.

Join WhatsApp

Join Now

Join Telegram

Join Now