Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್ ಘೋಷಣೆ

---Advertisement---

ಬೆಂಗಳೂರು.ಜುಲೈ.10: ರಾಜ್ಯದಲ್ಲಿ ಮುಂಗಾರು ಮಳೆ ದಿನದಿಂದ ದಿನಕ್ಕೆ ಚುರುಕುಕೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ತೀರ ಪ್ರದೇಶಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ.

ರಾಜ್ಯದ ಪ್ರಮುಖ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನದ ಏರುಪೇರಿನ ಹಿನ್ನೆಲೆಯಲ್ಲಿ ಈಗಾಗಲೇ ಆರು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು (IMD) ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ ಎರಡು ದಿನಗಳ ಕಾಲ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಕರಾವಳಿ ತೀರದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಇಂದು ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ನದಿ ತೀರದ ನಿವಾಸಿಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ನೈಸರ್ಗಿಕ ವಿಕೋಪ ಕೇಂದ್ರವು ಈಗಾಗಲೇ ಜಾಗರೂಕರಾಗಿರುವಂತೆ ಸಂದೇಶ ರವಾನಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಭಾರಿ ಮಳೆಯ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

Join WhatsApp

Join Now

Join Telegram

Join Now