Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ ಮುನ್ಸೂಚನೆ; ಅಲರ್ಟ್ ಘೋಷಣೆ!

---Advertisement---

ಬೆಂಗಳೂರು.ಜುಲೈ.04: ಇಂದು ಮತ್ತು ನಾಳೆ ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿಯ ಹಾಗೂ ಮಲೆನಾಡಿನ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಜುಲೈ 4 ಹಾಗೂ 5ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಮೂರೂ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ. ಎಡೆಬಿಡದೆ ಸುರಿಯುವ ಮಳೆಯಿಂದಾಗಿ ನದಿಗಳು, ಕೆರೆ-ತೊರೆಗಳು ಹಾಗೂ ತಗ್ಗು ಪ್ರದೇಶಗಳು ಜಲಾವೃತಗೊಳ್ಳುವ ಆತಂಕ ಎದುರಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸ್ಥಳೀಯ ಆಡಳಿತಗಳಿಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕರಾವಳಿ ಮಾತ್ರವಲ್ಲದೆ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲೂ ಮುಂದಿನ 48 ಗಂಟೆಗಳ ಕಾಲ ವ್ಯಾಪಕ ಮಳೆಯಾಗಲಿದೆ. ಜೋರು ಗಾಳಿ ಹಾಗೂ ಸಿಡಿಲು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಭಾಗದಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರಲು ಕೋರಲಾಗಿದೆ.

Join WhatsApp

Join Now

Join Telegram

Join Now