Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಮುನ್ಸೂಚನೆ; ಹಲವೆಡೆ ಯಲ್ಲೋ ಅಲರ್ಟ್ ಘೋಷಣೆ

---Advertisement---

ಬೆಂಗಳೂರು.ಜುಲೈ.09: ತೀವ್ರ ಬರಗಾಲದಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ಕೊನೆಗೂ ಮುಂಗಾರು ಮಳೆ ತಂಪೆರೆದಿದ್ದು, ಪ್ರಸ್ತುತ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಮುಂದಿನ ಮೂರು ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಪ್ರಸ್ತುತ ಕರಾವಳಿಯ ಜಿಲ್ಲೆಗಳು ಸೇರಿದಂತೆ ಹಾಸನ, ಶಿವಮೊಗ್ಗ, ಮಡಿಕೇರಿ ಹಾಗೂ ಬೆಳಗಾವಿ ಭಾಗದಲ್ಲಿ ಅತ್ಯಧಿಕ ಮಳೆಯಾಗುತ್ತಿರುವುದನ್ನು ಖಚಿತಪಡಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಪ್ರಮುಖ ಪ್ರದೇಶಗಳಿಗೆ ಮುಂದಿನ ಎರಡು ದಿನಗಳ ಕಾಲ ‘ಯಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಮೂರು ದಿನಗಳ ಬಳಿಕ ಈ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹಂತ-ಹಂತವಾಗಿ ತಗ್ಗುವ ನಿರೀಕ್ಷೆಯಿದೆ. ಆದರೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಭಾಗಗಳಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಮುಂದಿನ ಹತ್ತು ದಿನಗಳ ಕಾಲ ಕೇವಲ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now